ಬೆಂಗಳೂರು(Bengaluru): ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ(36) ಸಾವು ಎಂಬ ಸಿಬಿಐ ವರದಿಯನ್ನು ಲಖನ್ ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿ, ಮರು ತನಿಖೆ ನಡೆಸುವಂತೆ ನಿರ್ದೇಶನ ನೀಡಿದೆ.
ಅಕ್ಟೋಬರ್ ೨೨ ರಿಂದ ಹೊಸ ತನಿಖೆ ಆರಂಭವಾಗಲಿದೆ, ಅನುರಾಗ್ ಕುಟುಂಬದವರ ದೂರಿನನ್ವಯ ಮರು ತನಿಖೆಗೆ ಕೋರ್ಟ್ ಆದೇಶ ಹೊರಡಿಸಿದೆ.
೨೦೦೭ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಮೃತದೇಹವು ೨೦೧೭ರಲ್ಲಿ ಲಖನೌದ ಹಜರತ್ ಗಂಜ್ ಗೆಸ್ಟ್ ಹೌಸ್‌ನಲ್ಲಿ ಮೇ೧೭ರಂದು ಪತ್ತೆಯಾಗಿತ್ತು. ಜನ್ಮದಿನದಂದೆ ತಿವಾರಿ ಮೃತದೇಹ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.
ಆಗ ತಿವಾರಿ ಕರ್ನಾಟಕ ರಾಜ್ಯದ ಆಹಾರ ಸರಬರಾಜು ಇಲಾಖೆಯ ಆಯುಕ್ತರಾಗಿದ್ದರು. ಅನ್ನಭಾಗ್ಯ ಅಕ್ಕಿ ಹಗರಣದ ಬಗ್ಗೆ ತನಿಖೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲು ಸಜ್ಜಾಗಿದ್ದರು. ಸಾವಿಗೂ ಕೆಲ ದಿನಗಳ ಹಿಂದೆ ಸಹೋದರ ಮಯಾಂಕ್‌ಗೆ ಕರ್ನಾಟಕದಲ್ಲಿ ದಕ್ಷ ಐಎಎಸ್ ಅಧಿಕಾರಿಗಳಿಗೆ ಕಲಸ ಮಾಡಲು ಆಗುತ್ತಿಲ್ಲ. ನನಗೂ ಸಹ ಜೀವಭಯವಿದೆ. ಆದಷ್ಟು ಬೇಗ ಮರಳಿ ಉತ್ತರಪ್ರದೇಶಕ್ಕೆ ಬರುವುದಾಗಿ ಮೆಸೇಜ್ ಮಾಡಿದ್ದರು.