ಬೆಂಗಳೂರು(Bengaluru): ನಗರದ ಹಲವೆಡೆ ಪೇ-ಸಿಎಂ ಪೋಸ್ಟರ್ ಅಳವಡಿಸುವ ಮೂಲಕ ಕಾಂಗ್ರೆಸ್ ವಿನೂತನ ಅಭಿಯಾನ ನಡೆಸುತ್ತಿದೆ.
ರಾಜ್ಯ ಬಿಜೆಪಿ ಸರ್ಕಾರ ‘ಶೇ 40 ಕಮಿಷನ್ ಸರ್ಕಾರ’ವೆಂದು ಆರೋಪಿಸಿ ‘ಪೇ ಸಿಎಂ’ (PayCM) ಘೋಷಣೆಯ ಭಿತ್ತಿಪತ್ರ ಮತ್ತು ಕ್ಯೂ ಆರ್ ಕೋಡ್ ಸಹಿತ ಕಾಂಗ್ರೆಸ್ ಪಕ್ಷ ಅಭಿಯಾನ ಆರಂಭಿಸಿದೆ.
ಬೆಂಗಳೂರು ನಗರದ ವಿವಿಧೆಡೆ ಮುಖ್ಯಮಂತ್ರಿ ಚಿತ್ರ ಸಹಿತ ಈ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧದ ದೂರುಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಘಟಕ ಇತ್ತೀಚೆಗೆ ಬಿಡುಗಡೆ ಮಾಡಿದ ‘ಶೇ 40 ಕಮಿಷನ್ ಸರ್ಕಾರ’ ವೆಬ್ ಸೈಟ್ ತೆರೆದುಕೊಳ್ಳಲಿದೆ. ಸಾರ್ವಜನಿಕರು ನೇರವಾಗಿ ಈ ಮೂಲಕವೂ ಕಾಂಗ್ರೆಸ್ ವೆಬ್ಸೈಟ್ ಮೂಲಕ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ಸರ್ಕಾರದ ಭ್ರಷ್ಟಾಚಾರದ ಕುರಿತು ತಮ್ಮ ಅನಿಸಿಕೆಗಳನ್ನು ಸಹ ಹಂಚಿಕೊಳ್ಳಬಹುದಾಗಿದೆ.
ಈ ಮಧ್ಯೆ, ವಿಧಾನಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ‘ಶೇ 40 ಕಮಿಷನ್ ಸರ್ಕಾರ’ ಎಂದು ಆರೋಪಿಸಿ ನಿಲುವಳಿ ಸೂಚನೆ ಮಂಡಿಸಲಿದ್ದಾರೆ.