ಬೆಂಗಳೂರು(Bengaluru): ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಚತಾ ಕೆಲಸ ಮಾಡುತ್ತಿರುವ ಒಟ್ಟು 43 ಸಾವಿರ ಪೌರ ಕಾರ್ಮಿಕರನ್ನು ಖಾಯಂ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತಾದ ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಪೌರ ಕಾರ್ಮಿಕರಿಗೆ ಸರ್ಕಾರದ ಎಲ್ಲ ಸೌಲಭ್ಯ ದೊರೆಯುವಂತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.