ಮನೆ ರಾಜಕೀಯ ಗುರುವಾರ ಸಚಿವರೊಬ್ಬರ ಅಕ್ರಮವನ್ನು ದಾಖಲೆ ಸಮೇತ ಬಯಲಿಗೆಳೆಯುತ್ತೇನೆ: ಹೆಚ್.ಡಿ.ಕುಮಾರಸ್ವಾಮಿ

ಗುರುವಾರ ಸಚಿವರೊಬ್ಬರ ಅಕ್ರಮವನ್ನು ದಾಖಲೆ ಸಮೇತ ಬಯಲಿಗೆಳೆಯುತ್ತೇನೆ: ಹೆಚ್.ಡಿ.ಕುಮಾರಸ್ವಾಮಿ

0

ಕಲಬುರಗಿ(Kalaburagi): ಸಚಿವರೊಬ್ಬರು ನಿಯಮ ಉಲ್ಲಂಘಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಕುರಿತು ಗುರುವಾರ ಅಧಿವೇಶನದಲ್ಲಿ ದಾಖಲೆ ಸಮೇತ ಅಕ್ರಮ ಬಯಲಿಗೆ ಎಳೆಯುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಬುಧವಾರ ಪತ್ರಕರ್ತರ ಜತೆಗೆ ಮಾತನಾಡಿದ ಅವರು, ಸದನದಲ್ಲಿಯೇ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ನಾಳೆಯವರೆಗೂ ಕಾಯಿರಿ. ಯಾವ ಸಚಿವರು, ಅವರ ಹೆಸರು ಎಲ್ಲಾ ನಾಳೆ ಸದನದಲ್ಲಿ ಬಹಿರಂಗ ಪಡಿಸುತ್ತೇನೆ. ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಲ್ಲ, ಇದು ಹಿಟ್ ಆ್ಯಂಡ್ ರನ್ ಅಲ್ಲ ಎಂದು ಸ್ಪಷ್ಟಪಡಿಸಿದರು.

ನನ್ನ ಬಗ್ಗೆ ಹಗುರವಾಗಿ ಮತ್ತು ಏಕವಚನದಲ್ಲಿ ಮಾತನಾಡಿರುವ ಆ ಸಚಿವರಿಗೆ ಇದು ಸ್ಯಾಂಪಲ್ ಮಾತ್ರ. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಶಂಕಿತ ಉಗ್ರರು ಪತ್ತೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಂತಹ ಚಟುವಟಿಕೆ ಪ್ರಾರಂಭವಾಗಿದ್ದರೆ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಸರ್ಕಾರದ ಇಂಟಲಿಜೆನ್ಸ್ ದೊಡ್ಡ ಮಟ್ಟದಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಇಂತಹ ಘಟನೆಗಳು ನಮ್ಮ ರಾಜ್ಯಕ್ಕೆ ಒಳ್ಳೆಯದಲ್ಲಾ. ಇಂತಹ ಶಕ್ತಿಗಳನ್ನು ಮಟ್ಟಹಾಕುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.

ದೇವೇಗೌಡರನ್ನು ಅನೇಕ ರಾಜಕೀಯ ನಾಯಕರ ಭೇಟಿ ವಿಚಾರದ ಬಗ್ಗೆ ಮಾತನಾಡಿ, ಅವರ ಆರೋಗ್ಯದ ಬಗ್ಗೆ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಅದರಲ್ಲಿ ಯಾವುದೇ ರಾಜಕೀಯ ಇಲ್ಲಾ. ದೇವೇಗೌಡರು ಆರೋಗ್ಯವಾಗಿದ್ದಾರೆ ಎಂದ ಅವರು, ಈಗಿನ ಸರ್ಕಾರದಲ್ಲಿ ಭ್ರಷ್ಟ ವ್ಯವಸ್ಥೆ ಬಗ್ಗೆ ಜನಸಾಮಾನ್ಯರು ಚರ್ಚೆ ಮಾಡುತ್ತಿದ್ದಾರೆ. 40% ಚರ್ಚೆ ಬಗ್ಗೆ ಎಲ್ಲರಿಗೂ ಗೊತ್ತಿದೆ. ರೈತರಿಗೆ ನೀಡುವ ಸಬ್ಸಿಡಿಯಲ್ಲಿ ಕೂಡಾ ಕಮಿಷನ್ ಪಡೆಯುತ್ತಿದ್ದಾರೆ ಅಂತ ರೈತರು ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಕೂಡಾ ಬಹಳಷ್ಟು ಭ್ರಷ್ಟಾಚಾರ ನಡೆದಿತ್ತು ಎಂದು ಆರೋಪಿಸಿದರು.