ಮನೆ ರಾಷ್ಟ್ರೀಯ ದಸರಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂದು ಆಹ್ವಾನ

ದಸರಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂದು ಆಹ್ವಾನ

0

ಮೈಸೂರು(Mysuru) : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ಭೇಟಿ ಮಾಡಿ ದಸರಾ ಮಹೋತ್ಸವ 2022ರ ಉದ್ಘಾಟನೆಗೆ ಆಹ್ವಾನಿಸಲಿದ್ದಾರೆ.

ಕೇಂದ್ರ ಸಚಿವರಾದ ನಿರ್ಮಲ ಸೀತಾರಾಮನ್, ಪ್ರಹ್ಲಾದ್ ಜೋಶಿ, ರಾಜು ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ ನಾರಾಯಣಸ್ವಾಮಿ, ಭಗವಂತ ಖೂಬಾ ಅವರನ್ನೂ ದಸರಾ ಮಹೋತ್ಸವಕ್ಕೆ ಆಹ್ವಾನಿಸಲಿದ್ದಾರೆ.

ಸೆಪ್ಟೆಂಬರ್ 26ರಂದು ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಬೆಳಿಗ್ಗೆ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ.