ಮನೆ ರಾಜಕೀಯ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್

0

ಬೆಂಗಳೂರು(Bengaluru): ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರನ್ನು ಪದ್ಮನಾಭನಗರದಲ್ಲಿನ ಅವರ ನಿವಾಸದಲ್ಲಿಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಜಗದೀಶ್‌ ಶೆಟ್ಟರ್‌ ಅವರೊಂದಿಗೆ ಸಚಿವ ಶಂಕರ್ ಪಾಟೀಲ್ ಮುನೇಕೊಪ್ಪ ಅವರೂ ಜೊತೆಗಿದ್ದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸೋಮವಾರ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿದ್ದರು.

ಮರುದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರು ಕೂಡ ಪದ್ಮನಾಭನಗರಕ್ಕೆ ತೆರಳಿ ಜೆಡಿಎಸ್‌ ವರಿಷ್ಠರ ಆರೋಗ್ಯ ವಿಚಾರಿಸಿ ಬಂದಿದ್ದರು.