ಶಿವಸೇನಾ ಸಂಸದ ಸಂಜಯ್ ರಾವುತ್ ವಿರುದ್ಧ ಜಾರಿ ನಿರ್ದೇಶನಾಲಯ (ಇ ಡಿ) ಸಲ್ಲಿಸಿದ್ದ ಐದು ಸಂಪುಟಗಳ ಆರೋಪಪಟ್ಟಿಯನ್ನು ಸೋಮವಾರ ಸಂಜ್ಞೇಯ ಗಣನೆಗೆ ತಗೆದುಕೊಂಡಿರುವ ಮುಂಬೈನ ನ್ಯಾಯಾಲಯವೊಂದು ಪತ್ರಾ ಚಾಲ್ ಭೂ ಹಗರಣ ಮತ್ತು ಅದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೇಲ್ನೋಟಕ್ಕೆ ರಾವುತ್ ಅವರ ಪಾತ್ರ ಇರುವಂತಿದೆ ಎಂದು ತಿಳಿಸಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ವಿಶೇಷ ನ್ಯಾಯಾಧೀಶ ಎಂ ಜಿ ದೇಶಪಾಂಡೆ ಸೋಮವಾರ ಆರೋಪಪಟ್ಟಿ ಪರಿಗಣಿಸಿದರಾದರೂ ಆ ಕುರಿತ ಆದೇಶದ ಪ್ರತಿ ಮಾಧ್ಯಮಗಳಿಗೆ ತಡವಾಗಿ ಲಭಿಸಿದೆ.
ನ್ಯಾಯಾಧೀಶರ ಅವಲೋಕನ
• ಕಿಯಾನಾ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ನಿಂದ ಪ್ರಾರಂಭವಾದ ₹ 1,039 ಕೋಟಿ ಹಣದ ವ್ಯವಹಾರ. ರಾವುತ್ ಅವರಿಗೆ ಅವರ ಪತ್ನಿ ಮೂಲಕ ಸಂದಾಯವಾದ ಹಣ ₹ 1.06 ಕೋಟಿ.
• ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯ ಸೆಕ್ಷನ್ 50ರ ಪ್ರಕಾರ ದಾಖಲಿಸಲಾದ ಸಾಕ್ಷ್ಯ ಮತ್ತು ಹೇಳಿಕೆಗಳ ಪ್ರಕಾರ ರಾವುತ್ ಅಪರಾಧ ಕೃತ್ಯದಲ್ಲಿ ಭಾಗವಹಿಸಿದ್ದಾರೆ.
• ರಾವುತ್ ವಿರುದ್ಧ ವಿಚಾರಣೆ ನಡೆಸಲು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾಕಷ್ಟು ಆಧಾರಗಳಿವೆ.
ಈ ಅವಲೋಕನಗಳೊಂದಿಗೆ, ನ್ಯಾಯಾಲಯವು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೋಮವಾರ ರಾವುತ್ ಅವರಿಗೆ ನೋಟಿಸ್ ಜಾರಿಗೊಳಿಸಿತ್ತು. ಅದರಂತೆ ರಾವುತ್ ಮಂಗಳವಾರ ನ್ಯಾಯಾಲಯಕ್ಕೆ ಹಾಜರಾದರು. ಅವರ ಹಾಜರಾತಿಯನ್ನು ಗಮನಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 27, 2022ಕ್ಕೆ ನಿಗದಿಪಡಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.