ಮನೆ ರಾಜಕೀಯ ಬೆಂಗಳೂರಿನ ಬೀದಿ ಬದಿಯ ಗೋಡೆಗೆ ಪೇಸಿಎಂ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ನಾಯಕರು

ಬೆಂಗಳೂರಿನ ಬೀದಿ ಬದಿಯ ಗೋಡೆಗೆ ಪೇಸಿಎಂ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ನಾಯಕರು

0

ಬೆಂಗಳೂರು(Bengaluru): ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸರಕಾರದ ಶೇ. 40 ರಷ್ಟು ಕಮಿಷನ್ ಭ್ರಷ್ಟಾಚಾರದ ಬಗ್ಗೆ ಚರ್ಚೆಗೆ ಅವಕಾಶ ಸಿಗದಿದ್ದಕ್ಕೆ ಆಕ್ರೋಶಗೊಂಡ ಕಾಂಗ್ರೆಸ್ ನಾಯಕರು ನಗರದ  ಬೀದಿ ಬದಿಯ ಗೋಡೆಗಳು, ಕಾಂಪೌಂಡ್​ಗಳು ಮತ್ತು ಕಟ್ಟಡಗಳಿಗೆ ಪೇಸಿಎಂ ಪೋಸ್ಟರ್ ಅಂಟಿಸಿದರು.

ನಗರದ ರೇಸ್​ಕೋರ್ಸ್ ರಸ್ತೆಯಲ್ಲಿನ ಕಾಂಪೌಂಡ್ ಗೋಡೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಇತರ ಮುಖಂಡರು, ಶಾಸಕರು , ಕಾರ್ಯಕರ್ತರು ಪೇಸಿಎಂ ಪೋಸ್ಟರ್​ ಅಂಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡರ ಪೋಸ್ಟರ್ ಅಭಿಯಾನದಿಂದಾಗಿ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಸ್ಥಳದಲ್ಲಿ ಪರಿಸ್ಥಿತಿ ನಿಭಾಯಿಸಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿದರು.