ಕರ್ನಾಟಕ ಹೈ ಕೋರ್ಟ್ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 16 ಜಿಲ್ಲಾ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಕೀಲಿ ವೃತ್ತಿಯಲ್ಲಿ ತೊಡಗಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 19 ಆಗಿದೆ.
16 ಹುದ್ದೆಗಳಲ್ಲಿ 14 ಬ್ಯಾಕ್ಲಗ್ ಹುದ್ದೆಗಳಾಗಿದ್ದು, 2 ಹೊಸ ಹುದ್ದೆಗಳಾಗಿದೆ.
ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಕಾನೂನು ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಮಾಜಿ ಸೈನಿಕರು, ಪ.ಜಾ, ಪ.ಪಂ ಅಭ್ಯರ್ಥಿಗಳು: 3 ವರ್ಷಗಳು
ಅರ್ಜಿ ಶುಲ್ಕ: ಪೂರ್ವಭಾವಿ ಪರೀಕ್ಷಾ ಶುಲ್ಕ
ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಎ ಅಭ್ಯರ್ಥಿಗಳು: 250 ರೂ.
ಎಲ್ಲಾ ಇತರ ಅಭ್ಯರ್ಥಿಗಳು: 500 ರೂ.
ಮುಖ್ಯ ಪರೀಕ್ಷಾ ಶುಲ್ಕ
ಪ.ಜಾ, ಪ.ಪಂ ಮತ್ತು ಪ್ರವರ್ಗ 1ಎ ಅಭ್ಯರ್ಥಿಗಳು: 750 ರೂ.
ಎಲ್ಲಾ ಇತರ ಅಭ್ಯರ್ಥಿಗಳು: 1000 ರೂ.
ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್
ಆಯ್ಕೆ ಪ್ರಕ್ರಿಯೆ:
ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ವೈವಾ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20ಸೆಪ್ಟೆಂಬರ್ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19 ಅಕ್ಟೋಬರ್ 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 21 ಅಕ್ಟೋಬರ್ 2022
ಅಧಿಕೃತ ವೆಬ್‌ಸೈಟ್: karnatakajudiciary.kar.nic.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.
ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್ಲೋಡ್ ಮಾಡಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್ ಕ್ಲಿಕ್ ಮಾಡಿ