ಮನೆ ಉದ್ಯೋಗ ಬೆಂಗಳೂರು ವಿವಿಯಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ವಿವಿಯಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

0

ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ  ವಿವಿಧ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಷಯಗಳ ಭೋಧನೆಗೆ ಪೂರ್ಣ ಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಸೂಕ್ತ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 26 ಆಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್​ ಕಾಲೇಜಿಗೆ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ವಾಸ್ತು ಶಾಸ್ತ್ರ, ಮೆಕಾನಿಕಲ್​ ಇಂಜಿನಿಯರಿಂಗ್​, ಎಲೆಕ್ಟ್ರಾನಿಕ್ಸ್​​ ಅಂಡ್​ ಕಮ್ಯೂನಿಕೇಷನ್​, ಕಂಪ್ಯೂಟರ್​ ಸೈನ್ಸ್​ ಮತ್ತು ಮಾಹಿತಿ ತಂತ್ರಜ್ಞಾನ, ಸಿವಿಲ್​ ಇಂಜಿನಿಯರಿಂಗ್​ನಲ್ಲಿ ಈ ಹುದ್ದೆಗಳು ಕಾಲಿ ಇವೆ. ಈ ಹುದ್ದೆಗಳನ್ನು ಪ್ರಸಕ್ತ ಸಾಲಿನ ಅವಧಿಗೆ ಮಾತ್ರ ನೇಮಕಾತಿ ಮಾಡಲಾಗುತ್ತಿದ್ದು, ಇವು ಸಂಪೂರ್ಣವಾಗಿ ತಾತ್ಕಾಲಿಕವಾಗಿದೆ.

ಶೈಕ್ಷಣಿಕ ಅರ್ಹತೆ: ಬೆಂಗಳೂರು ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿ ನಿಯಮಗಳ ಪ್ರಕಾರ

ಅರ್ಜಿ ಸಲ್ಲಿಕೆ : ಆಫ್​ಲೈನ್​

ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:  12 ಸೆಪ್ಟೆಂಬರ್​ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಸೆಪ್ಟೆಂಬರ್​​ 2022

ಅಧಿಕೃತ ವೆಬ್‌ಸೈಟ್: bangaloreuniversity.ac.in

ಅರ್ಜಿ ಸಲ್ಲಿಕೆ ವಿಳಾಸ
ಸಂಬಂಧಪಟ್ಟ ಇಲಾಖೆಗಳ ಅಧ್ಯಕ್ಷರು, ಯುವಿ.ಸಿ.ಇ, ಕೆ.ಆರ್. ವೃತ್ತ, ಬೆಂಗಳೂರು – 560001.

ಅರ್ಜಿ ಪ್ರತಿ ಪಡೆಯ ಲಿಂಕ್

www.bangaloreuniversity.ac.in ಅಥವಾ ulcbangalore.com

ಅರ್ಜಿ ಸಲ್ಲಿಕೆ ವಿಧಾನ

ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಿ.