ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜ್ಯೂನಿಯರ್ ಸೈಂಟಿಫಿಕ್ ಆಫೀಸರ್, ಫಾಲೋ ಆಪ್ ಕೌನ್ಸಿಲರ್ ಸೇರಿದಂತೆ ಒಟ್ಟು 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 10 ಆಗಿದೆ.
ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್
ಹುದ್ದೆ ಹೆಸರು: ಫಾಲೋ-ಅಪ್ ಕೌನ್ಸಿಲರ್, ಜೂನಿಯರ್ ಸೈಂಟಿಫಿಕ್ ಆಫೀಸರ್
ಹುದ್ದೆಗಳ ಸಂಖ್ಯೆ: 10
ಉದ್ಯೋಗ ಸ್ಥಳ: ಬೆಂಗಳೂರು
ವೇತನ: 23100-38500 ರೂ ಪ್ರತಿ ತಿಂಗಳು
ಅರ್ಜಿ ಸಲ್ಲಿಕೆ: ಆಫ್ಲೈನ್
ಅರ್ಜಿ ಶುಲ್ಕ: ಶುಲ್ಕ ವಿನಾಯಿತಿ
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23 ಸೆಪ್ಟೆಂಬರ್ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಅಕ್ಟೋಬರ್ 2022
ಪ್ರಮುಖ ಲಿಂಕ್ಗಳು
ಅಧಿಕೃತ ವೆಬ್‌ಸೈಟ್: nimhans.ac.in
ಅರ್ಜಿ ಸಲ್ಲಿಕೆ ವಿಧಾನ
ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ
ಅರ್ಜಿ ಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಸ್ಪೀಡ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಿ.