ಮನೆ ಕಾನೂನು ಕರ್ನಾಟಕ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಆಗಿ ಬಿ ಮುರಳೀಧರ್‌ ಪೈ ನೇಮಕ

ಕರ್ನಾಟಕ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಆಗಿ ಬಿ ಮುರಳೀಧರ್‌ ಪೈ ನೇಮಕ

0

ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಆಗಿ ಜಿಲ್ಲಾ ನ್ಯಾಯಾಧೀಶರಾದ ಬಿ ಮುರಳೀಧರ್‌ ಪೈ ಅವರನ್ನು ನೇಮಿಸಲಾಗಿದೆ. ಅವರು ಹಾಲಿ ಈ ಹುದ್ದೆಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ಅರಾಧೆ ಅವರ ನಿರ್ದೇಶನದಂತೆ ವಿಚಕ್ಷಣಾ ವಿಭಾಗದ ರಿಜಿಸ್ಟ್ರಾರ್‌ ಕೆ ಎಸ್‌ ಭರತ್‌ ಕುಮಾರ್‌ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ರಿಜಿಸ್ಟ್ರಾರ್‌ ಜನರಲ್‌ ಆಗಿದ್ದ ಟಿ ಜಿ ಶಿವಶಂಕರೇಗೌಡ ಅವರು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕವಾಗಿದ್ದರಿಂದ ಆ ಹುದ್ದೆಯು ಖಾಲಿಯಾಗಿತ್ತು.

ನ್ಯಾಯಿಕ ರಿಜಿಸ್ಟ್ರಾರ್‌ ಜನರಲ್‌ ಆಗಿದ್ದ ಜೈಶಂಕರ್‌ ಅವರನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದ್ದು, ಸದರಿ ಹುದ್ದೆಯು ಖಾಲಿಯಾಗಿದೆ. ಇದರ ಪ್ರಭಾರಿಯಾಗಿ ಭರತ್‌ಕುಮಾರ್‌ ನೇಮಕವಾಗಿದ್ದಾರೆ.