ಬೆಂಗಳೂರು(Bengaluru): ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 7 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದು ನಾಲ್ವರನ್ನು ಬಂಧಿಸಿದ್ದಾರೆ.
ನಾಲ್ವರು ಮಹಿಳೆ ಸೇರಿ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ಬಂಧಿತರಿಂದ 7 ಕೋಟಿ 80 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 1ಕೆಜಿ ಎಂಡಿಎಂಎ 8 ಹ್ಯಾಶಿಸ್ ಆಯಲ್ 10 ಕೆಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಜೂನ್ 24 ರಂದು ಡಿಜೆಯೊಬ್ಬನನ್ನ ವಿವೇಕನಗರ ಪೊಲೀಸರು ಬಂಧಿಸಿದ್ದರು. ಬಳಿಕ ಡ್ರಗ್ಸ್ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. ಆಂಧ್ರದ ಚಿಂತಪಲ್ಲಿಯಿಂದ ಬೆಂಗಳೂರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು. ರೈಲಿನಲ್ಲಿ ಬಂದು ಪೆಡ್ಲರ್ ಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎನ್ನಲಾಗಿದೆ.
Saval TV on YouTube