ಮನೆ ರಾಷ್ಟ್ರೀಯ ದೇಶದಲ್ಲಿ 5 ವರ್ಷಗಳವರೆಗೆ ಪಿಎಫ್’ಐ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ

ದೇಶದಲ್ಲಿ 5 ವರ್ಷಗಳವರೆಗೆ ಪಿಎಫ್’ಐ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ

0

ನವದೆಹಲಿ(Newdelhi): ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಮೇಲೆ ದಾಳಿ ಹಾಗೂ ಹಲವಾರು ಮಂದಿ ಮುಖಂಡರು, ಕಾರ್ಯಕರ್ತರ ಬಂಧನದ ಬೆನ್ನಲ್ಲೇ ಇದೀಗ ಪಿಎಫ್ಐ ಸಂಘಟನೆಯನ್ನು ಕೇಂದ್ರ ಸರಕಾರ 5 ವರ್ಷಗಳ ಕಾಲ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ.

ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಮಾಹಿತಿ ನೀಡಿದೆ.

ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಾದ ರಿಹಾಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ಎನ್‌ಸಿಎಚ್‌ಆರ್‌ಒ, ನ್ಯಾಷನಲ್‌ ವುಮೆನ್ಸ್‌ ಫ್ರಂಟ್‌ (ಎನ್‌ಡಬ್ಲ್ಯೂಎಫ್‌), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಸಂಘಟನೆಗಳನ್ನು ನಿಷೇಧಿಸಲಾಗಿದೆ.

ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಇತ್ತೀಚೆಗಷ್ಟೇ ಪಿಎಫ್‌ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಐಎನ್‌ಎ) ದಾಳಿ ನಡೆಸಿತ್ತು.