ಮನೆ ರಾಷ್ಟ್ರೀಯ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಬೀಳ್ಕೊಡುಗೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಬೀಳ್ಕೊಡುಗೆ

0

ಬೆಂಗಳೂರು(Bengaluru): ಮೂರು ದಿನಗಳ ಕಾಲ ರಾಜ್ಯಪ್ರವಾಸ ಕೈಗೊಂಡಿದ್ದ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್‌ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು.

ಮೈಸೂರು ದಸರಾ, ಧಾರಾವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಅಂಡ್ ಟೆಕ್ನಾಲಜಿಯನ್ನು ಉದ್ಘಾಟಿಸಿದ್ದಲ್ಲದೇ ಧಾರವಾಡ ಮಹಾನಗರ ಪಾಲಿಕೆಯಿಂದ ಪೌರ ಸನ್ಮಾನ ಸ್ವೀಕರಿಸಿದ್ದರು.

ಬೆಂಗಳೂರಿನ ಹೆಚ್.ಎ.ಎಲ್ ನಲ್ಲಿ ಕ್ರಯೋಜನಿಕ್ ಪ್ರತ್ಯೇಕ ಘಟಕ ಹಾಗೂ ವರ್ಚುವಲ್ ಕಾರ್ಯಕ್ರಮದ ಮೂಲಕ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿ ಕೇಂದ್ರದ ದಕ್ಷಿಣವಲಯ ಸಂಶೋಧನಾ ಕೇಂದ್ರಕ್ಕೆ ಶಂಕುಸ್ಥಾಪನೆ ಮಾಡಿ ಚಾಲನೆ ನೀಡಿದ್ದರು. ಇದೇ ಸಂದರ್ಭದಲ್ಲಿ ನಗರದ ನೂತನ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯವನ್ನು ಸಹ ಉದ್ಘಾಟಿಸಿದ್ದರು

ಸೆ. 27 ರಂದು ರಾಜ್ಯ ಸರ್ಕಾರದಿಂದ ನಾಗರಿಕ ಸನ್ಮಾನವನ್ನು ಸ್ವೀಕರಿಸಿದ ರಾಷ್ಟ್ರಪತಿಗಳಿಗೆ ರಾತ್ರಿ ರಾಜಭವನದಲ್ಲಿ ವಿಶೇಷ ಔತಣಕೂಟವನ್ನು ಸಹ ಏರ್ಪಡಿಸಲಾಗಿತ್ತು.

ಕಳೆದ ಮೂರು ದಿನಗಳಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ರಾಷ್ಟ್ರಪತಿಗಳು ರಾಜ್ಯ ಪ್ರವಾಸ ಮುಗಿಸಿ ಇಂದು ನವದೆಹಲಿಗೆ ಪ್ರಯಾಣಿಸಿದರು.

ಈ ಸಮಯದಲ್ಲಿ ಬೃಹತ್ ಕೈಗಾರಿಕಾ ಸಚಿವರಾದ ಮುರುಗೇಶ್ ನಿರಾಣಿ , ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಭೂ ಸೇನಾ ಅಧಿಕಾರಿ ಬಸಂತ್ ರೆಪ್ಸ್ ಪಾಲ್, ನೌಕಾ ಸೇನಾಧಿಕಾರಗಳಾದ ರೂಪನ್ ಬೆಂಬೇ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.