ಮನೆ ಮನರಂಜನೆ ನಟ ಮಹೇಶ್ ಬಾಬು ತಾಯಿ ಇಂದಿರಾ ದೇವಿ ಇನ್ನಿಲ್ಲ

ನಟ ಮಹೇಶ್ ಬಾಬು ತಾಯಿ ಇಂದಿರಾ ದೇವಿ ಇನ್ನಿಲ್ಲ

0

ಹೈದರಾಬಾದ್‌(Hydarabad): ತೆಲುಗಿನ ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ನಿಧನರಾಗಿದ್ದಾರೆ.

ಅವರಿಗೆ 70 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಇಂದಿರಾ ದೇವಿ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.  ಬುಧವಾರ ಬೆಳಗ್ಗೆ 4 ಗಂಟೆಗೆ ಇಂದಿರಾ ದೇವಿ ನಿಧನರಾದರು ಎಂದು ಮಹೇಶ್ ಬಾಬು ಕುಟುಂಬದವರು ತಿಳಿಸಿದ್ದಾರೆ.

ಅವರ ಅಗಲಿಕೆಗೆ ಆಪ್ತರು, ಗೆಳೆಯರು, ಸಿನಿಮಾ ಸೆಲೆಬ್ರಿಟಿಗಳು ಸೇರಿದಂತೆ ಮಹೇಶ್‌ ಬಾಬು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ.

ಮಹೇಶ್ ಬಾಬು ತಂದೆ ಕೃಷ್ಣ ಅವರು 70– 80ರ ದಶಕದಲ್ಲಿ ತೆಲುಗು ಸಿನಿಮಾಗಳಲ್ಲಿ ಸೂಪರ್ ಸ್ಟಾರ್ ಆಗಿ ಮಿಂಚಿದ್ದರು. ಈ ವರ್ಷ ಆರಂಭದಲ್ಲಿ ಅವರ ಹಿರಿಯ ಪುತ್ರ ರಮೇಶ್ ಬಾಬು ಕೊನೆಯುಸಿರೆಳೆದಿದ್ದರು. ಈಗ ಕೃಷ್ಣ ಪತ್ನಿ ಇಂದಿರಾ ದೇವಿ ನಿಧನದಿಂದ ಇಡೀ ಕುಟುಂಬದಲ್ಲಿ ಶೋಕ ಆವರಿಸಿದೆ.

ಇಂದಿರಾ ದೇವಿ ಅವರ ಅಂತ್ಯಸಂಸ್ಕಾರ ಮಧ್ಯಾಹ್ನ 12 ಗಂಟೆ ನಂತರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.