ಮನೆ ರಾಜ್ಯ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ

ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ

0

ಬೆಂಗಳೂರು(Bengaluru): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕನಕಪುರ ನಿವಾಸದ ಮೇಲೆ ಇಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಕನಕಪುರದ ತಹಶೀಲ್ದಾರ್ ಅವರನ್ನು ಕರೆದುಕೊಂಡ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಡಿಕೆ ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ದಾಖಲೆಗಳ ಪರಿಶೀಲನೆ ಜೊತೆಗೆ ಜಿಲ್ಲೆಯಲ್ಲಿ ಅವರಿಗೆ ಸೇರಿದ ಆಸ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಿದೆ.

ಡಿಕೆ ಶಿವಕುಮಾರ್ ಕುಟುಂಬಸ್ಥರು, ಸಂಬಂಧಿಕರ ಹೆಸರಿನಲ್ಲಿನ ಭೂಮಿ ನೋಂದಣಿಯಾಗಿರುವ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಬಿಐ ಅಧಿಕಾರಿಗಳು ಕನಕಪುರ, ದೊಡ್ಡಆಲಹಳ್ಳಿ, ಸಂತೆ  ಕೋಡಿಹಳ್ಳಿ ಮನೆ, ತೋಟದ ಮನೆ-ಜಮೀನು ಮತ್ತಿತ್ತರ ಸ್ಥಳಗಳಿಗೆ ಭೇಟಿ ನೀಡಿ ಆಸ್ತಿ-ಪಾಸ್ತಿ ಅದಕ್ಕೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಸಿಬಿಐ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್ ಅವರು, ಕೇಂದ್ರೀಯ ತನಿಖಾ ದಳಕ್ಕೆ ತಾವು ಹೊಂದಿರುವ ಆಸ್ತಿ-ಪಾಸ್ತಿ ಬಗ್ಗೆ ಈ ಮೊದಲೇ ಎಲ್ಲ ಅಗತ್ಯ ದಾಖಲೆಗಳನ್ನು ನೀಡಿದ್ದಾಗಿ ತಿಳಿಸಿದ್ದಾರೆ.