ಮನೆ ರಾಜ್ಯ ದಸರಾ ಯುವ ಕವಿಗೋಷ್ಠಿ ಉದ್ಘಾಟನೆ

ದಸರಾ ಯುವ ಕವಿಗೋಷ್ಠಿ ಉದ್ಘಾಟನೆ

0

ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಿದ್ದ “ಯುವ ಕವಿಗೋಷ್ಠಿ” ಯನ್ನು ಶಾಸಕರಾದ ಜಿ.ಟಿ.ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಎಲೆ ಮರೆಕಾಯಿಯಂತಿರುವ ಯುವ ಕವಿಗಳನ್ನು ಗುರುತುಸಿ,ಪ್ರೋತ್ಸಾಹಿಸುವ ಕಾರ್ಯವಾಗಬೇಕಿದೆ. ಜೀವನ ಮೌಲ್ಯಗಳನ್ನು ಬೆಳೆಸುವ ಹಾಗೂ ಸಾಮಾಜಿಕ ಮಾನವೀಯ ನೆಲೆಯಲ್ಲಿ ಸಾಹಿತ್ಯ ರಚಿಸುವ ಜವಾಬ್ದಾರಿ ನಿಮ್ಮದಾಗಿದೆ.  ಈ ನಿಟ್ಟಿನಲ್ಲಿ ಯುವ ಕವಿಗಳು ಮುಂದಾಗಬೇಕು ಎಂದರು.

ಸಾಹಿತ್ಯಕ್ಕೆ ಸಮಾಜ ಬದಲಾಯಿಸುವ ಶಕ್ತಿ ಯಿದೆ. ಕುವೆಂಪು,ಬೇಂದ್ರೆ,ಕಾರಂತರಂತಹ ಹಿರಿಯ ಸಾಹಿತಿಗಳನ್ನು ಯುವ ಸಾಹಿತಿಗಳನ್ನು ಸ್ಪೂರ್ತಿ ಯಾಗಿಸಿಕೊಂಡು ನೆಲ,ಜಲ,ಭಾಷೆ ಸಂರಕ್ಷಿಸಬೇಕು. ಅವರ ಆದರ್ಶಗಳನ್ನು ಮೂಗೂಡಿಸಿಕೊಂಡು ಅವರ ದಾರಿಯಲ್ಲಿ ಸಾಗಬೇಕು ಎಂದು ಹೇಳಿದರು.

 ಕವಿ ಎಚ್.ಎಸ್.ವೆಂಕಟಮೂರ್ತಿ ಅವರು ಅಧ್ಯಕ್ಷತೆವಹಿಸಿ ಮಾತನಾಡಿ, ಒಬ್ಬ ಮನುಷ್ಯ, ಇನ್ನೊಬ್ಬ ಮನುಷ್ಯನೊಡನೆ ತಾರ್ಕಿಕವಾಗಿ ನಡೆಸುವ ಸಂವಾದವೇ ಕವಿತೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸುಮಾರು ಮೂವತ್ತಕ್ಕೂ ಹೆಚ್ಚು ಕವಿಗಳು ಕವಿತೆಗಳನ್ನು ವಾಚನ ಮಾಡಿದರು.

ಕಾರ್ಯಕ್ರಮದಲ್ಲಿ ವಿಮರ್ಶಕಿ ಡಾ‌.ಮಂಗಳಾ ಪ್ರಿಯದರ್ಶಿನಿ,ಮೇಯರ್ ಶಿವಕುಮಾರ್, ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ಮೈಸೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಇತರರು ಉಪಸ್ಥಿತರಿದ್ದರು.