ಬ್ಯಾಂಕ್ ಆಫ್ ಬರೋಡಾದಲ್ಲಿ 346 ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಿಲೇಶನ್ಶಿಪ್ ಮ್ಯಾನೇಜರ್, ಇ-ವೆಲ್ತ್ ರಿಲೇಶನ್ಶಿಪ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕ್ನ ಸಂಪತ್ತು ನಿರ್ವಹಣಾ ಸೇವೆಗಳ ವಿಭಾಗದಿಂದ ಈ ಹುದ್ದೆಗಳ ನೇಮಕಾತಿ ನಡೆಯಲಿದೆ.
ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಆಸಕ್ತಿ ಹೊಂದಿರುವ ಅರ್ಹ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್ಲೈನ್ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 20 ಆಗಿದೆ.
ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಬ್ಯಾಂಕ್ ಹೆಸರು: ಬ್ಯಾಂಕ್ ಆಫ್ ಬರೋಡಾ (BOB)
ಹುದ್ದೆಯ ಹೆಸರು: ಸೀನಿಯರ್ ರಿಲೇಶನ್ಶಿಪ್ ಮ್ಯಾನೇಜರ್, ಇ-ವೆಲ್ತ್ ರಿಲೇಶನ್ಶಿಪ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 346
ಉದ್ಯೋಗ ಸ್ಥಳ: ಅಖಿಲ ಭಾರತ
ಸಂಬಳ: BOB ನಿಯಮಗಳ ಪ್ರಕಾರ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
ಪ.ಜಾ, ಪ.ಪಂ ಮತ್ತು ಮಹಿಳಾ ಅಭ್ಯರ್ಥಿಗಳು: 100 ರೂ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು: 600 ರೂ.
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್’ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30 ಸೆಪ್ಟೆಂಬರ್ 2022
ಆನ್ಲೈನ್’ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಅಕ್ಟೋಬರ್ 2022
ಅಧಿಕೃತ ವೆಬ್’ಸೈಟ್ bankofbaroda.in
ಅರ್ಜಿ ಸಲ್ಲಿಕೆ ವಿಧಾನ
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಭರ್ತಿ ಮಾಡಿ
ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ವಿಳಾಸಕ್ಕೆ ಅರ್ಜಿ ಸಲ್ಲಿಸಿ.