ಮನೆ ರಾಜಕೀಯ ಚಾಮರಾಜನಗರ ಜಿಲ್ಲೆ ಅಭಿವೃದ್ಧಿ ಮಾಡಿರುವುದು ಬಿಜೆಪಿ: ಸಚಿವ ವಿ.ಸೋಮಣ್ಣ

ಚಾಮರಾಜನಗರ ಜಿಲ್ಲೆ ಅಭಿವೃದ್ಧಿ ಮಾಡಿರುವುದು ಬಿಜೆಪಿ: ಸಚಿವ ವಿ.ಸೋಮಣ್ಣ

0

ಬೆಂಗಳೂರು(Bengaluru): ಚಾಮರಾಜನಗರ ಜಿಲ್ಲೆಯ ಇತಿಹಾಸದಲ್ಲಿ ಏನಾದರೂ ಒಂದಷ್ಟು ಅಭಿವೃದ್ಧಿ ಕೆಲಸಗಳಾಗಿದ್ದರೆ, ಅದು ಬಿಜೆಪಿಯಿಂದ ಮಾತ್ರ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್‌.ಪಟೇಲ್‌ ಅವರು ಚಾಮರಾಜನಗರ ಜಿಲ್ಲೆ ಪ್ರಾರಂಭಿಸಿದರು. ಆಗ ನಾನು ಸಚಿವನಾಗಿ ಕೆಲಸ ಮಾಡುತ್ತಿದೆ. ಪಟೇಲರು ಚಾಮರಾಜನಗರ ಜಿಲ್ಲಾ ನಾಮಕರಣ ಮಾಡಿ ಜಿಲ್ಲಾ ಕೇಂದ್ರ ಕಟ್ಟಿದ್ದನ್ನು ಹೊರತುಪಡಿಸಿದರೆ ಮುಂದೆ ಬಂದ ಕಾಂಗ್ರೆಸ್‌ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದರು.

ಸುಮಾರು 212 ಕೋಟಿ ರೂ. ವೆಚ್ಚದಲ್ಲಿ 22 ಕೆರೆಗಳಿಗೆ ನೀರು ತುಂಬಿಸುವ ಕೆಲಸ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಆರಂಭವಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ ನೀರಾವರಿ ಸಚಿವರಾಗಿದ್ದು, ನಾನು ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಒಂದೇ ಬಾರಿಗೆ 110 ಕೋಟಿ ರೂ. ಬಿಡುಗಡೆ ಮಾಡಿಸಿದ್ದೇನೆ. ಮಲೆಮಾದೇಶ್ವರ ಬೆಟ್ಟದ ರಸ್ತೆಗಳ ವಿಸ್ತರಣೆ ಮತ್ತು ಅಭಿವೃದ್ಧಿ ನಡೆದಿದೆ ಎಂದು ತಿಳಿಸಿದರು.

200ಕ್ಕೂ ಹೆಚ್ಚು ಕೆರೆಗಳನ್ನು ಗುರುತಿಸಿ ಅವುಗಳಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿದೆ. ಅ.15ರ ವೇಳೆಗೆ ಬಸವರಾಜ ಬೊಮ್ಮಾಯಿ ಅವರು ಯೋಜನೆಗೆ ಚಾಲನೆ ಕೊಡಲಿದ್ದಾರೆ. 2-3 ವರ್ಷದಲ್ಲಿ ಎಲ್ಲ ಕೆರೆಗಳಿಗೆ ನೀರು ಹರಿಸಲಾಗುವುದು. ಗುಡಿಸಲು ರಹಿತ ಜಿಲ್ಲೆ ಮಾಡಲಾಗುವುದು. ಜಿಲ್ಲೆ ಶಾಪಗ್ರಸ್ಥ ಎಂಬ ಹಣೆಪಟ್ಟಿಯಿಂದ ಹೊರಬರಲು ಇದು ಪೂರಕ ಎಂದು ಹೇಳಿದರು.

ಭಾರತ್ ಜೋಡೋ ಯಾತ್ರೆ ಅಲ್ಲಲ್ಲಿ ವಾಹನ ಹತ್ತಿ ಇಳಿಯುವ ಯಾತ್ರೆ

ಕಾಂಗ್ರೆಸ್‌ ಹಮ್ಮಿಕೊಂಡಿರುವ ಭಾರತ ಜೋಡೊ ಯಾತ್ರೆಯು ಪಾದಯಾತ್ರೆಯಲ್ಲ, ಬದಲಿಗೆ ಅದು ಅಲ್ಲಲ್ಲಿ ವಾಹನ ಹತ್ತುವ-ಇಳಿಯುವ ಯಾತ್ರೆ ಎಂದು ವಸತಿ ಸಚಿವ ವಿ.ಸೋಮಣ್ಣ ವ್ಯಂಗ್ಯ ವಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಜನತಾ ಪಕ್ಷದ ಅಧ್ಯಕ್ಷರಾಗಿದ್ದ ಚಂದ್ರಶೇಖರ್‌ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನಡೆದುಕೊಂಡು ಬಂದಿದ್ದರು. ನಾನೂ ನೂರಾರು ಕಿ.ಮೀ. ಸುತ್ತಾಡಿಕೊಂಡು ಬಂದಿದ್ದೆ. ಕಾಂಗ್ರೆಸ್‌ನವರದ್ದು ಪಾದಯಾತ್ರೆಯಲ್ಲ, ಅಲ್ಲಲ್ಲಿ ಹತ್ತುವುದು-

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ರಾಜ್ಯ ಕಾರ್ಯದರ್ಶಿ ಮತ್ತು ವಿಧಾನಪರಿಷತ್‌ ಸದಸ್ಯ ಕೇಶವ್‌ ಪ್ರಸಾದ್‌ ಉಪಸ್ಥಿತರಿದ್ದರು.