ಮನೆ ಅಪರಾಧ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿತ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿತ

0

ದಾವಣಗೆರೆ(Davanagere):  ಜಿಲ್ಲೆಯ ಚನ್ನಗಿರಿ ತಾಲೂಕಿನ ಗ್ರಾಮವೊಂದರ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನಿಗೆ ಪೋಷಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಹಲವು ದಿನಗಳಿಂದ ಬಾಲಕಿಗೆ ತರಗತಿ ಮುಗಿದ ನಂತರ ಸರ್ಕಾರಿ ಶಾಲೆಯ ಶಿಕ್ಷಕ ಲೋಕೇಶ್ ಹೊದಿಗೆರೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.  

ಲೈಂಗಿಕ ಕಿರುಕುಳ ಕುರಿತು ಬಾಲಕಿಯು ಪೋಷಕರಿಗೆ ತಿಳಿಸಿದ್ದಾಳೆ. ವಿಷಯ ತಿಳಿದ ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕನ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಚನ್ನಗಿರಿ ಬಿಇಒ ಮಂಜುನಾಥ್ ಭೇಟಿ ನೀಡಿ ಘಟನೆ‌ ಬಗ್ಗೆ ಮಾಹಿತಿ ಪಡೆದಿದ್ದಾರೆ. ಬಳಿಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಲೋಕೇಶ್ ಅವರನ್ನು ಅಮಾನತು ಮಾಡುವಂತೆ ಆದೇಶಿಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದೂರು ದಾಖಲಾಗಿದೆ.