ಜೈಲುವಾಸ ಅನುಭವಿಸುತ್ತಿರುವ ತೃತೀಯ ಲಿಂಗಿಗಳನ್ನು ಪುರುಷ ಅಥವಾ ಮಹಿಳೆಯರ ಕೋಣೆಗಳಲ್ಲಿ ಇರಿಸದೆ ಅವರಿಗಾಗಿ ಪ್ರತ್ಯೇಕ ಕೋಣೆಗಳನ್ನು ಮೀಸಲಿಡಲು ಕೇಂದ್ರ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲಿಸಲಾಗಿದೆಯೇ ಎಂಬದನ್ನು ಖಾತ್ರಿಪಡಿಸುವಂತೆ ಪಾಟ್ನಾ ಹೈಕೋರ್ಟ್ ಇತ್ತೀಚೆಗೆ ಬಿಹಾರ ಸರ್ಕಾರಕ್ಕೆ ಸೂಚಿಸಿದೆ.
[ಲಾ ಫೌಂಡೇಷನ್ ಮತ್ತು ಬಿಹಾರ ಸರ್ಕಾರ ನಡುವಣ ಪ್ರಕರಣ]
ಜೈಲುಗಳಲ್ಲಿ ಬಂಧಿಯಾಗಿರುವ ತೃತೀಯ ಲಿಂಗಿ ವ್ಯಕ್ತಿಗಳ ಹಿತಾಸಕ್ತಿಗಳನ್ನು ರಕ್ಷಿಸಲು ಸರ್ಕಾರ ಕೆಲವು ಕ್ರಮಗಳನ್ನು ತೆಗೆದುಕೊಂಡಿರುವುದನ್ನು ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ನ್ಯಾಯಮೂರ್ತಿ ಎಸ್ ಕುಮಾರ್ ಅವರಿದ್ದ ಪೀಠ ಗಮನಿಸಿತು.
ನ್ಯಾಯಾಂಗ ಬಂಧನ ಅಥವಾ ಪೊಲೀಸ್ ವಶದಲ್ಲಿರುವಾಗ ತೃತೀಯ ಲಿಂಗಿ ಕೈದಿಗಳಿಗೆ ಪ್ರತ್ಯೇಕ ಜೈಲು ಕೋಣೆಗಳು, ವಾರ್ಡ್ಗಳು: ಅಥವಾ ಆಸ್ಪತ್ರೆಗಳು ಮತ್ತು ಲಾಕಪ್ಗಳನ್ನ ಒದಗಿಸಲಾಗಿದೆಯೇ ಎಂಬುದನ್ನು ಖಾತ್ರಿಪಡಿಸಲು ರಾಜ್ಯ ಜೈಲು ಅಧಿಕಾರಿಗಳು ಮತ್ತು ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು.
ಮನವಿಗೆ ಸಂಬಂಧಿಸಿದಂತೆ ಸರ್ಕಾರ ಸಾಕಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು ಹೆಚ್ಚಿನ ಆದೇಶಗಳನ್ನು ನೀಡುವ ಅಗತ್ಯವಿಲ್ಲ ಎಂದು ಪೀಠವು ಹೇಳಿತು. ಆದರೂ, ಅಧಿಕಾರಿಗಳು ಗಣನೆಗೆ ತೆಗೆದುಕೊಳ್ಳದ ಯಾವುದೇ ಅಹವಾಲು ಅಥವಾ ಸಮಸ್ಯೆ ಇದ್ದರೆ ಅದನ್ನು ಪ್ರಸ್ತಾಪಿಸಲು ಅರ್ಜಿ ಸಲ್ಲಿಸಿರುವ ಸರ್ಕಾರೇತರ ಸಂಸ್ಥೆ ಮುಕ್ತವಾಗಿದೆ ಎಂದು ತಿಳಿಸಿದ ನ್ಯಾಯಾಲಯ ಅರ್ಜಿಯನ್ನು ವಿಲೇವಾರಿ ಮಾಡಿತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.