ಮನೆ ರಾಷ್ಟ್ರೀಯ ಭಾರತೀಯ ಸೇನಾ ಹೆಲಿಕಾಪ್ಟರ್ ಪತನ: ಓರ್ವ ಪೈಲಟ್ ಸಾವು

ಭಾರತೀಯ ಸೇನಾ ಹೆಲಿಕಾಪ್ಟರ್ ಪತನ: ಓರ್ವ ಪೈಲಟ್ ಸಾವು

0

ನವದೆಹಲಿ(Newdelhi): ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಬುಧವಾರ ಪತನಗೊಂಡಿದ್ದು, ಒಬ್ಬ ಪೈಲಟ್ ಮೃತಪಟ್ಟಿದ್ದಾರೆ.

ತವಾಂಗ್ ಬಳಿಯ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಸೇನಾ ವಾಯುಯಾನ ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಪತನಗೊಂಡಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಪೈಲಟ್’ ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಪೈಲಟ್ ಪೈಲಟ್‌ಗಳಲ್ಲಿ ಒಬ್ಬರಾದ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಪೈಲಟ್ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.