ಮನೆ ರಾಜ್ಯ ಜಂಬೂಸವಾರಿ ಮೆರವಣಿಗೆಗೆ ಸಿಎಂ ಬೊಮ್ಮಾಯಿ ಚಾಲನೆ

ಜಂಬೂಸವಾರಿ ಮೆರವಣಿಗೆಗೆ ಸಿಎಂ ಬೊಮ್ಮಾಯಿ ಚಾಲನೆ

0

ಮೈಸೂರು(Mysuru): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದಸರಾ ಜಂಬೂ ಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು.

ಚಿನ್ನದ ಅಂಬಾರಿಯಲ್ಲಿ ವೀರಾಜಮಾನರಾಗಿರುವ ತಾಯಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಅಧಿಕೃತ ಚಾಲನೆ ನೀಡಿದರು.

ಈ ವೇಳೆ  ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಸಚಿವರಾದ ಎಸ್.ಟಿ ಸೋಮಶೇಖರ್,  ಸುನೀಲ್ ಕುಮಾರ್ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.