ಮನೆ ಅಪರಾಧ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

0

ಕಲಬುರಗಿ(Kalaburagi): ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉದನೂರ ರಸ್ತೆಯ ಬಸಂತ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಸಂತೋಷ ಕಾಲೋನಿ ನಿವಾಸಿ ಲಕ್ಷ್ಮಿಪುತ್ರ (35) ಕೊಲೆಯಾದ ಯುವಕ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಯುವಕನನ್ನು ಕೊಲೆಗೈದಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಅಶೋಕ ನಗರ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.