ಥಾಯ್ಲೆಂಡ್(Thailand): ಈಶಾನ್ಯ ಪ್ರಾಂತ್ಯದಲ್ಲಿ ಮಕ್ಕಳ ಆರೈಕೆ ಕೇಂದ್ರದಲ್ಲಿ ಗುರುವಾರ ಗುಂಡಿನ ದಾಳಿ ನಡೆದಿದ್ದು, 30 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.
ಲ್ಯಾಂಫು ಪಟ್ಟಣದ ಮಧ್ಯಭಾಗದಲ್ಲಿ ಬಂದೂಕುಧಾರಿಯು ಮಧ್ಯಾಹ್ನದ ವೇಳೆಗೆ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಅಚಾಯೋನ್ ಕ್ರೈಥೋಂಗ್ ಹೇಳಿದ್ದಾರೆ. ಸಾವಿಗೀಡಾದವರಲ್ಲಿ ಮಕ್ಕಳು ಮತ್ತು ವಯಸ್ಕರು ಸೇರಿದ್ದಾರೆ ಬಂದೂಕುಧಾರಿ ಮಾಜಿ ಪೊಲೀಸ್ ಅಧಿಕಾರಿಯಾಗಿದ್ದು, ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕ್ರಮ ಕೈಗೊಳ್ಳಲು ಮತ್ತು ಅಪರಾಧಿಯನ್ನು ಬಂಧಿಸಲು ಪ್ರಧಾನಿ ಎಲ್ಲಾ ಏಜೆನ್ಸಿಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ 30 ಜನರು ಸಾವನ್ನಪ್ಪಿದ್ದಾರೆ ಆದರೆ ಈ ಬಗ್ಗೆ ಹೆಚ್ಚಿನ ವಿವರಗಳಿಲ್ಲ ಎಂದು ಅವರು ಹೇಳಿದರು.
ದಾಳಿ ಬಳಿಕ ಬಂದೂಕುಧಾರಿ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ಬಗ್ಗೆ ಮತ್ತಷ್ಟು ಮಾಹಿತಿಗಳು ಹೊರಬೀಳಬೇಕಿದೆ.