ಬೆಂಗಳೂರು(Bengaluru): ದೇಶದಲ್ಲಿ ಎಲ್ಲಾ ಧರ್ಮೀಯರಿಗೂ ಏಕರೂಪದ ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿಯಾಗಬೇಕು. ಈ ಕುರಿತು ಸಾರ್ವಜನಿಕ ಚರ್ಚೆಯಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂದು ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ನೀಡಿರುವ ದೇಶದಲ್ಲಿ ಎಲ್ಲ ಧರ್ಮೀಯರಿಗೂ ಅನ್ವಯ ಆಗುವಂತೆ ಜನಸಂಖ್ಯೆ ನಿಯಂತ್ರಣ ಆಗಬೇಕು ಸಲಹೆ ವ್ಯಾಪಕವಾಗಿ ಚರ್ಚೆ ಆಗಬೇಕು. ಬಳಿಕ ಎಲ್ಲ ರಾಜ್ಯಗಳ ವಿಧಾನಸಭೆಗಳು ಮತ್ತು ಸಂಸತ್ತಿನಲ್ಲೂ ಚರ್ಚೆ ನಡೆಸಿ ಕಾನೂನು ಜಾರಿ ಆಗಲಿ ಎಂದು ಹೇಳಿದರು.
ಕೋಳಿ ಕೇಳಿ ಮಸಾಲೆ ಅರೆಯುವುದಿಲ್ಲ ಎಂಬುದು ಹಳ್ಳಿ ಕಡೆಯಲ್ಲಿ ಚಾಲ್ತಿಯಲ್ಲಿರುವ ಮಾತು. ಆದರೆ, ನಾವು ಆ ರೀತಿ ವರ್ತಿಸುವುದಿಲ್ಲ. ಈ ವಿಷಯದಲ್ಲಿ ವಿಸ್ತೃತ ಚರ್ಚೆ ಆಗಬೇಕು ಎಂದು ಬಯಸುತ್ತೇವೆ. ಆ ಬಳಿಕವೇ ಜಾರಿಗೆ ಆಗಲಿ. ಇಂದಿರಾಗಾಂಧಿ ಕಾಲದಲ್ಲಿ ಸಂಜಯ್‌ಗಾಂಧಿ ಬ್ರಿಗ್ರೇಡ್ ಸಿಕ್ಕವರನ್ನು ಕರೆದುಕೊಂಡು ಬಂದು ಕಟ್ ಮಾಡುತ್ತಿದ್ದರು. ನಾವು ಹಾಗೇ ಮಾಡುವುದಿಲ್ಲ ಎಂದರು.
ದೇಶದಲ್ಲಿ ಜಾತಿಯತೆ ಮುಕ್ತ ಮತ್ತು ಅಸ್ಪೃಶ್ಯತೆ ಮುಕ್ತ ಹಿಂದೂ ಸಮಾಜ ನಿರ್ಮಾಣವಾಗಬೇಕು. ಯಾವುದೇ ತಾರತಮ್ಯಗಳು ಇರಬಾರದು ಎಂಬುದು ಭಾಗವತ್ ಅವರ ಉದ್ದೇಶ. ಆರ್‌ಎಸ್‌ಎಸ್ ಹಿಂದಿನಿಂದಲೂ ಇದೇ ಸಂಸ್ಕಾರವನ್ನು ಬೆಳೆಸಿಕೊಂಡು ಬಂದಿದೆ. ಬಿಜೆಪಿ ಅದಕ್ಕೆ ಬದ್ಧವಾಗಿದೆ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆಯವರು ಸ್ವ ಇಚ್ಚೆಯಿಂದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿಲ್ಲ. ಸೋನಿಯಾಗಾಂಧಿ ಅವರ ನಿರ್ದೇಶನದಂತೆ ನಾಮಪತ್ರ ಸಲ್ಲಿಸಿದ್ದಾರೆ. ಅವರು ಬಯಸಿದರೆ ಚುನಾವಣೆ ನಡೆಯಬಹುದು. ಇಲ್ಲದಿದ್ದರೆ ಏನು ಬೇಕಾದರೂ ಆಗಬಹುದು. ಖರ್ಗೆ ಅವರು ಮೊದಲು ಗುಲಾಮಿ ಮನಸ್ಥಿಯಿಂದ ಹೊರಬರಬೇಕು. ಸುದೀರ್ಘ ರಾಜಕೀಯ ಅನುಭವ ಇರುವ ಅವರ ವ್ಯಕ್ತಿತ್ವ ಜೀತದ ಮನಸ್ಥಿತಿಯನ್ನು ಒಪ್ಪುವಂತಹದ್ದಲ್ಲ ಎಂದು ಭಾವಿಸಿದ್ದೇನೆ. ಮುಳುಗುತ್ತಿರುವ ದೋಣಿಯ ನಾವಿಕನಂತಿರುವ ಪಕ್ಷಕ್ಕೆ ಯಾರೇ ನಾಯಕರಾದರೂ ಏನು ಪ್ರಯೋಜನ ಎಂದು ಪ್ರಶ್ನಿಸಿದರು.
ದತ್ತಾತ್ರೇಯ ಹೊಸಬಾಳೆ ಅವರು ಅಸಮಾನತೆ, ನಿರುದ್ಯೋಗ ಕುರಿತು ಸುದುದ್ದೇಶದಿಂದ ಕೆಲವು ಮಾತುಗಳನ್ನು ಹೇಳಿದ್ದಾರೆ. ಅದನ್ನು ಪಕ್ಷ ಸ್ವೀಕಾರ ಮಾಡುತ್ತದೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.