ಮನೆ ಅಪರಾಧ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಿಎಂಟಿಸಿ ಬಸ್: ವಿದ್ಯಾರ್ಥಿನಿ ಸ್ಥಿತಿ ಗಂಭೀರ

ಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಿಎಂಟಿಸಿ ಬಸ್: ವಿದ್ಯಾರ್ಥಿನಿ ಸ್ಥಿತಿ ಗಂಭೀರ

0

ಬೆಂಗಳೂರು(Bengaluru): ಬಸ್ ಹತ್ತುವಾಗ ಆಯತಪ್ಪಿ ಬಿದ್ಧ ವಿದ್ಯಾರ್ಥಿನಿ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಜ್ಞಾನಭಾರತಿ ಯುನಿವರ್ಸಿಟಿ ಬಳಿ ನಡೆದಿದೆ.

ಕೋಲಾರ ಮೂಲದ ವಿದ್ಯಾರ್ಥಿನಿ ಶಿಲ್ಪಾ ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು,  ನಾಗರಬಾವಿ ಪೊರ್ಟೀಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಹತ್ತುವಾಗ ಬಸ್  ಮುಂದಕ್ಕೆ ಚಲಿಸಿದ್ದು ಈ ವೇಳೆ ವಿದ್ಯಾರ್ಥಿನಿ ಶಿಲ್ಪಾ ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಬಸ್ ಹರಿದು ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

 ಬಸ್ ಅಪಘಾತ ಖಂಡಿಸಿ ವಿದ್ಯಾರ್ಥಿಗಳು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು . ಬಸ್ ಚಾಲಕನನ್ನು ಬಂಧಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.