ಲಖನೌ: ಬುದ್ಧ ಮತ್ತು ಸಾಮ್ರಾಟ ಅಶೋಕ ಅವರ ಅನುಯಾಯಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಆರೆಎಸ್’ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಇತರರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಮರುಪರಿಶೀಲಿಸಲು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.
ಹೆಚ್ಚುವರಿ ಜಿಲ್ಲಾ ನ್ಯಾಯಾದೀಶ ವಿನಯ್ ಸಿಂಗ್ ಅವರು ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಿದ್ದಾರೆ.
ಆರೆಸ್ಸೆಸ್ ನಾಯಕರ ವಿರುದ್ಧದ ಪ್ರಕರಣವನ್ನು ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ, ಅರ್ಜಿ ಮರುಪರಿಶೀಲಿಸುವಂತೆ ಕೋರಿ ಬ್ರಹ್ಮೇಂದ್ರ ಸಿಂಗ್ ಮೌರ್ಯ ಎಂಬುವವರು ಅರ್ಜಿ ಸಲ್ಲಿಸಿದ್ದರು.
ಮೊದಲಿನ ಆದೇಶ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಮೌರ್ಯ ಪರಿಶೀಲಿಸುವಂತೆ ಕೋರಿ ಸಲ್ಲಿಸುವ ಅರ್ಜಿಯಲ್ಲಿ ತಿಳಿಸಿದ್ದಾರೆ. ಆದರೆ ಈ ಅರ್ಜಿಯಲ್ಲಿ ವಿಚಾರಣೆಗೆ ತೆಗೆದುಕೊಳ್ಳುವಂತಹ ಮಹತ್ವದ ಸಂಗತಿ ಇಲ್ಲ ಎಂಬ ಕಾರಣಕ್ಕೆ ತಿರಸ್ಕರಿಸಲಾಗಿದೆ.
2016ರಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಇತರರ ಮುಖಂಡರ ವಿರುದ್ಧ ಬುದ್ಧ ಮತ್ತು ಸಾಮ್ರಾಟ ಅಶೋಕ ಚಕ್ರವರ್ತಿಯ ಅನುಯಾಯಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಮೌರ್ಯ ಆರೋಪಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.