ಪರ್ತ್: ವೆಸ್ಟರ್ನ್ ಆಸ್ಟ್ರೇಲಿಯಾ ಇಲೆವೆನ್ ವಿರುದ್ಧ ನಡೆದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವು 36 ರನ್ ಅಂತರದ ಸೋಲಿಗೆ ಶರಣಾಗಿದೆ.
ಪಂದ್ಯದಲ್ಲಿ ಏಕಾಂಗಿಯಾಗಿ ಹೋರಾಟ ನಡೆಸಿದ ಕನ್ನಡಿಗ ಕೆ.ಎಲ್. ರಾಹುಲ್ ಆಕರ್ಷಕ ಅರ್ಧಶತಕ ಗಳಿಸಿ ಗಮನ ಸೆಳೆದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟರ್ನ್ ಆಸ್ಟ್ರೇಲಿಯಾ, ನಿಕ್ ಹಾಬ್ಸನ್ (64) ಹಾಗೂ ಡಾರ್ಸಿ ಶಾರ್ಟ್ (52) ಆಕರ್ಷಕ ಅರ್ಧಶತಕಗಳ ನೆರವಿನಿಂದ ಎಂಟು ವಿಕೆಟ್ ನಷ್ಟಕ್ಕೆ 168 ರನ್ ಪೇರಿಸಿತ್ತು.
ಭಾರತದ ಪರ ರವಿಚಂದ್ರನ್ ಅಶ್ವಿನ್ ಮೂರು ಮತ್ತು ಹರ್ಷಲ್ ಪಟೇಲ್ ಎರಡು ವಿಕೆಟ್ ಕಿತ್ತು ಮಿಂಚಿದರು. ಬಳಿಕ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಎಂಟು ವಿಕೆಟ್ ನಷ್ಟಕ್ಕೆ 132 ರನ್ ಗಳಿಸಲಷ್ಟೇ ಸಾಧ್ಯವಾಯಿತು. ರಾಹುಲ್ ಹೊರತುಪಡಿಸಿ ಇತರೆಲ್ಲ ಬ್ಯಾಟರ್ಗಳು ವೈಫಲ್ಯ ಅನುಭವಿಸಿದರು.
55 ಎಸೆತಗಳನ್ನು ಎದುರಿಸಿದ ರಾಹುಲ್ ಒಂಬತ್ತು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 74 ರನ್ ಗಳಿಸಿದರು. ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡಿರಲಿಲ್ಲ. ಇನ್ನುಳಿದಂತೆ ರಿಷಭ್ ಪಂತ್ (9), ದೀಪಕ್ ಹೂಡಾ (6), ಹಾರ್ದಿಕ್ ಪಾಂಡ್ಯ (17), ದಿನೇಶ್ ಕಾರ್ತಿಕ್ (10), ಅಕ್ಷರ್ ಪಟೇಲ್ (2) ನಿರಾಸೆ ಮೂಡಿಸಿದರು.
ಆಸೀಸ್ ಪರ ಮ್ಯಾಥ್ಯೂ ಕೆಲ್ಲಿ, ಲಾನ್ಸ್ ಮೊರಿಸ್ ಹಾಗೂ ಹ್ಯಾಮಿಶ್ ಮೆಕೆಂಝಿ ತಲಾ ಎರಡು ವಿಕೆಟ್ ಕಬಳಿಸಿದರು.
ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ 13 ರನ್ ಅಂತರದ ಗೆಲುವು ದಾಖಲಿಸಿತ್ತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.