ಮೈಸೂರು(Mysuru): ಜಾನುವಾರುಗಳಲ್ಲಿ ಚರ್ಮಗಂಟು ರೋಗ (Lumpy Skin Disease) ವ್ಯಾಪಕವಾಗಿ ಹರಡುತ್ತಿರುವ ಕಾರಣ ಮೈಸೂರು ಜಿಲ್ಲೆಯ ತಿ.ನರಸೀಪುರ, ಸರಗೂರು ಮತ್ತು ಕೆ.ಆರ್.ನಗರ ತಾಲ್ಲೂಕುಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗವು (Lumpy Skin Disease) ಕಾಣಿಸಿಕೊಂಡಿದ್ದು ರೋಗ ವ್ಯಾಪಕವಾಗಿ ಹರಡುವ ಸಾಧ್ಯತೆ ಇರುತ್ತದೆ.
ರೋಗ ಹರಡುವಿಕೆ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಲಸಿಕೆ ಹಾಕುವ ಕಾರ್ಯ ಪ್ರಗತಿಯಲ್ಲಿರುತ್ತದೆ.
ಈ ಹಿನ್ನಲೆಯಲ್ಲಿ ರೋಗ ಹರಡುವುದನ್ನು ತಡೆಗಟ್ಟಲು ಮೈಸೂರು ಜಿಲ್ಲೆಯಾದ್ಯಂತ ಜಾನುವಾರುಗಳ ಸಾಗಾಣಿಕೆ ಹಾಗೂ ಸಂತೆಗಳನ್ನು ತಾತ್ಕಾಲಿಕವಾಗಿ 2022ರ ಅಕ್ಟೋಬರ್ 11 ರಿಂದ ಡಿಸೆಂಬರ್ 10 ರವರೆಗೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














