ಮೈಸೂರು(Mysuru): ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದ ಕುಮಾರಿ ದಿವ್ಯಾ ಬಾಲಕಿಯ ಅತ್ಯಾಚಾರ ಕೊಲೆ ಮಾಡಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಇಂತಹ ಹೇಯ ಕೃತ್ಯವನ್ನು ಖಂಡಿಸಿ ಇಂದು ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ನಡೆಸಲಾಯಿತು.
ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇವೆ. ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು.
ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು. ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ಸಂಶೋಧಕರೆಲ್ಲ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನಮಗೆಲ್ಲರಿಗೂ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಕರುಣಿಸಲಿ ಎಂದುಸಂಘದ ಪದಾಧಿಕಾರಿಗಳು ಪ್ರಾರ್ಥಿಸಿದರು.
ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಮಹೇಶ್ ಸೋಸ್ಲೆ, ಅಧ್ಯಕ್ಷ ನಟರಾಜ್ ಶಿವಣ್ಣ , ಉಪಾಧ್ಯಕ್ಷ ರಾಜೇಶ್ ,ಸಂಶೋಧನಾ ವಿದ್ಯಾರ್ಥಿಗಳಾದ ಪಾರ್ಥ, ರಾಘವೇಂದ್ರ , ನಂಜುಂಡಸ್ವಾಮಿ, ಪ್ರವೀಣ್, ರಂಗನಾಥ್, ನಾಗಮಲ್ಲು, ಮುತ್ತುರಾಜ್, ವೆಂಕಟೇಶ್ ಮುಂತಾದ ವಿದ್ಯಾರ್ಥಿಗಳು ಭಾಗವಹಿಸಿದ್ದರು.