ಮಂಡ್ಯ(Mandya): ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಂಡ್ಯ ತಾಲೂಕಿನ ಬೂದನೂರು ಕೆರೆಯು ಮತ್ತೆ ಒಡೆದಿದ್ದು ಮೈಸೂರು ಹಾಗೂ ಬೆಂಗಳೂರು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಕಳೆದ ಆಗಸ್ಟ್ ತಿಂಗಳಲ್ಲಿ ಕೊಡಿ ಒಡೆದು ಅಪಾರ ಹಾನಿ ಸಂಭವಿಸಿತ್ತು ಈ ಹಿನ್ನೆಲೆಯಲ್ಲಿ ಕೋಡಿಯನ್ನು ಕಟ್ಟದೆ ತಾತ್ಕಾಲಿಕವಾಗಿ ಮರಳು ಮೂಟೆಯಿಂದ ತಡೆಗೋಡೆ ನಿರ್ಮಿಸಲಾಗಿತ್ತು ಆದರೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಮತ್ತೆ ಕೋಡಿ ಒಡೆದಿದ್ದು ಸುಮಾರು 25 ಎಕರೆಯಲ್ಲಿ ಬಿತ್ತಿದ ಭತ್ತದ ಬೆಳೆ ನಾಶವಾಗಿದೆ.
ಅಲ್ಲದೇ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ಮಾರ್ಗ ಮಧ್ಯದಲ್ಲಿ ನೀರು ನಿಂತಿರುವುದರಿಂದ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಮೈಸೂರು ಕಡೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಿದ್ದಾರೆ.














