ಮನೆ ರಾಜಕೀಯ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಸೋನಿಯಾ, ಪ್ರಿಯಾಂಕಾ , ಪಿ.ಚಿದಂಬರಂ ಮತದಾನ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಸೋನಿಯಾ, ಪ್ರಿಯಾಂಕಾ , ಪಿ.ಚಿದಂಬರಂ ಮತದಾನ

0

ನವದೆಹಲಿ(Newdelhi): ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯ ದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮತದಾನ ಮಾಡಿದರು.

ಸಂಸದರಾದ ಪಿ. ಚಿದಂಬರಂ, ಜೈರಾಂ ರಮೇಶ್ ಮತ್ತು ಇತರ ನಾಯಕರು ಎಐಸಿಸಿ ಕಚೇರಿಯಲ್ಲಿ ಮತದಾನ ಮಾಡಿದರು.

ಬೆಂಗಳೂರಿನ ಮತಕೇಂದ್ರದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಮತದಾನ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹ ಮತದಾನ ಮಾಡಿದ್ದು, ಇಲ್ಲಿ 490 ಅಭ್ಯರ್ಥಿಗಳು ಮತದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಇದೇವೇಳೆ, ಮತದಾನ ಮಾಡುವ ವಿಧಾನವನ್ನೂ ಅವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ಮತದಾನ ಪ್ರಕ್ರಿಯೆ–ಮತಪತ್ರದಲ್ಲಿ ಇಬ್ಬರು ಅಭ್ಯರ್ಥಿಗಳ ಹೆಸರು ಇರುತ್ತದೆ.

ನೀವು ಮತ ​​ಹಾಕಲು ಬಯಸುವ ಅಭ್ಯರ್ಥಿಯ ಹೆಸರಿನ ಮುಂದೆ ರೈಟ್ ಟಿಕ್ ಮಾರ್ಕ್‌ ಮಾಡಿ.

ಬೇರೆ ಯಾವುದೇ ಗುರುತು ಅಥವಾ ಸಂಖ್ಯೆಯನ್ನು ಬರೆದರೆ ಮತದಾನವನ್ನು ಪರಿಗಣಿಸಲಾಗುವುದಿಲ್ಲ.