ವಿವಿಧ ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರಕ್ಕೆ ಸಂಬಂಧಿಸಿದ ಹಗರಣಗಳಲ್ಲಿ ಆರ್ಬಿಐ ಅಧಿಕಾರಿಗಳ ಪಾತ್ರ ಇರುವ ಬಗ್ಗೆ ತನಿಖೆ ನಡೆಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ವಕೀಲರಾದ ಸತ್ಯ ಸಬರ್ವಾಲ್ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಆರ್ಬಿಐಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
[ಡಾ. ಸುಬ್ರಮಣಿಯನ್ ಸ್ವಾಮಿ ಮತ್ತಿತರರು ಹಾಗೂ ಸಿಬಿಐ ಇನ್ನಿತರರ ನಡುವಣ ಪ್ರಕರಣ]
ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಬಿ ವಿ ನಾಗರತ್ನ ಅವರಿದ್ದ ಪೀಠ ಪ್ರಕರಣ ಪರಿಶೀಲಿಸುವುದಾಗಿ ತಿಳಿಸಿತು.
ಕಳೆದ ಕೆಲ ವರ್ಷಗಳಲ್ಲಿ ಆರ್ಬಿಐ ಮತ್ತಿತರ ಏಜೆನ್ಸಿಗಳು ಪತ್ತೆ ಮಾಡಿದ ಬ್ಯಾಂಕಿಂಗ್ ವಂಚನೆಗಳ ಸಂಖ್ಯೆ ಮತ್ತು ಅದರ ಮೊತ್ತ ದೊಡ್ಡದಾಗಿದ್ದರೂ, ಠೇವಣಿದಾರರು ಹೂಡಿಕೆದಾರರು ಹಾಗೂ ಷೇರುದಾರರು ಸೇರಿದಂತೆ ವಿವಿಧ ಪಾಲುದಾರರ ಹಿತಾಸಕ್ತಿಗಳನ್ನು ರಕ್ಷಿಸಲು ಆರ್ಬಿಐ ವಿಫಲವಾಗಿದೆ ಎಂದು ಸ್ವಾಮಿ ಮತ್ತು ವಕೀಲ ಸತ್ಯ ಸಬರ್ವಾಲ್ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.
ಇದು ಇಡೀ ಬ್ಯಾಂಕಿಂಗ್ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳಲು ಕಾರಣವಾಗಿದೆ. ಬ್ಯಾಂಕ್ಗಳ ನಿಯಂತ್ರಕ ಆರ್ಬಿಐ ವಂಚನೆಗಳ ಸರಣಿ ಬಗ್ಗೆ ಉದಾಸೀನ ಧೋರಣೆ ತಳೆದಿರುವುದು ಪ್ರಶ್ನೆಗಳು ಮೂಡುವಂತೆ ಮಾಡಿದೆ. ಹೀಗಾಗಿ ಆರ್ಬಿಐನ ಈ ಕೆಳಗಿನ ಹಗರಣಗಳ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಅರ್ಜಿ ಕೋರಿದೆ:
ಕಿಂಗ್’ಫಿಷರ್ ಹಗರಣ;
ಬ್ಯಾಂಕ್ ಆಫ್ ಮಹಾರಾಷ್ಟ್ರ ಹಗರಣ;
ಉತ್ತರ ಪ್ರದೇಶ ಮೂಲದ ಖಾಸಗಿ ಸಕ್ಕರೆ ಸಂಸ್ಥೆ ಹಗರಣ;
ನೀರವ್ ಮೋದಿ/ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ;
ಐಎಲ್&ಎಫ್ಎಸ್ ಹಗರಣ;
ಪಿಎಂಸಿ ಬ್ಯಾಂಕ್ ಹಗರಣ;
ಯೆಸ್ ಬ್ಯಾಂಕ್ ಹಗರಣ;
ಲಕ್ಷ್ಮಿ ವಿಲಾಸ್ ಬ್ಯಾಂಕ್ ಹಗರಣ;
ರೋಟೊಮ್ಯಾಕ್ ಗ್ಲೋಬಲ್ ಪ್ರೈವೇಟ್ ಲಿಮಿಟೆಡ್ ಹಗರಣ;
ಫಸ್ಟ್ ಲೀಸಿಂಗ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ ಹಗರಣ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.