ಬೆಂಗಳೂರು(Bengaluru): ರಾಜ್ಯ ರಾಜಧಾನಿಯಲ್ಲಿ ರಾರಾಜಿಸುತ್ತಿರುವ ರಸ್ತೆಗುಂಡಿಗಳಿಂದ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ ಎಂದು ಆರೋಪಿಸಿದ್ದಾರೆ.
ರಸ್ತೆಗುಂಡಿಗಳು ಸಾವಿನ ಗುಂಡಿಗಳಾಗಿವೆ. ನಗರದ ಲುಲೂ ಮಾಲ್ ಎದುರಿನ ರಸ್ತೆಯಲ್ಲಿ ಗುಂಡಿಗೆ ಇನ್ನೊಂದು ಜೀವ ಬಲಿಯಾಗಿದ ಮೇಲೆ ಎಚ್ಚೆತ್ತುಕೊಳ್ಳುವ ನಾಟಕ ನಡೆದಿದೆ. ಶಾಶ್ವತ ಪರಿಹಾರ ಎಲ್ಲಿ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿಕೂಪಗಳು ಸರಣಿ ಸಾವುಗಳಿಗೆ ಕಾರಣವಾಗಿದ್ದರೆ, ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷವಾಗಿವೆ. ರಾಜ್ಯ ಬಿಜೆಪಿ ಸರಕಾರಕ್ಕೆ ರಸ್ತೆ ಗುಂಡಿಗಳು ಎಂದರೆ ಬಲು ಇಷ್ಟ. ಗುಂಡಿಗಳು ಬಿದ್ದಷ್ಟೂ ಕಿಸೆಗೆ ಹರಿದು ಬರಲಿದೆ ದುಡ್ಡು. ಇವರಿಗೆ ಹೈಕೋರ್ಟ್ ಛೀಮಾರಿ ಹಾಕಿದರೂ ನಾಚಿಕೆ, ಸಂಕೋಚ ಎನ್ನವುದಿಲ್ಲ. ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ಕೊಟ್ಟರೂ ಅಧಿಕಾರಿಗಳು ಭಂಡತನ ಬಿಡುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಗುಂಡಿ ಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿರುವುದು ಒಂದೆಡೆ, ಇನ್ನೊಂದೆಡೆ ಸರಕಾರ ಜಾಗತಿಕ ಹೂಡಿಕೆದಾರರ ಸಮಾವೇಶ, ಜಾಗತಿಕ ತಂತ್ರಜ್ಞಾನ ಶೃಂಗ ನಡೆಸುತ್ತಿದೆ. ‘ ರಸ್ತೆ ಗುಂಡಿಗಳ ಶೃಂಗ’ (Potholes Summit) ವನ್ನೂ ನಡೆಸಿದರೆ ಇನ್ನೂ ಚೆನ್ನಾಗಿರುತ್ತದೆ ಎಂದಿದ್ದಾರೆ.
ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರಕಾರವೇ ನೇರ ಕಾರಣ. ಮುಗ್ಧ ಜನರು ಸಾವು ನೋವುಗಳಿಗೆ ಬಿಬಿಎಂಪಿಯೇ ಸಂಪೂರ್ಣ ಹೊಣೆ. ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳೇ ಇದಕ್ಕೆ ಉತ್ತರದಾಯಿಗಳು ಎಂದು ಟ್ವೀಟ್’ನಲ್ಲಿ ಹೇಳಿದ್ದಾರೆ.
ಪಾಲಿಕೆ ಮಾಡಿದ ಪಾಪಕ್ಕೆ ನತದೃಷ್ಟ ಮಹಿಳೆ ಉಮಾದೇವಿ ಅವರು ಬಲಿಯಾಗಿದ್ದಾರೆ. ಅವರಿಗೆ ಪರಿಹಾರ ಕೊಟ್ಟು ಕೈತೊಳೆದುಕೊಳ್ಳುವುದಲ್ಲ. ಇನ್ನಾದರೂ ಗುಂಡಿಗಳನ್ನು ಮುಚ್ಚಬೇಕು ಹಾಗೂ ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು ಎಂದು ಹೇಳಿದ್ದಾರೆ.
ಮೃತ ಮಹಿಳೆ ಶ್ರೀಮತಿ ಉಮಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ರಾಜ್ಯ ಸರಕಾರ ಅವರಿಗೆ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.