ಮನೆ ರಾಷ್ಟ್ರೀಯ ಭಾರತ-ಪಾಕಿಸ್ತಾನದ ಗಡಿಯಲ್ಲಿ ನಿರ್ಮಾಣವಾಗಲಿರುವ ವಾಯುನೆಲೆಗೆ ಪ್ರಧಾನಿ ಶಂಕುಸ್ಥಾಪನೆ

ಭಾರತ-ಪಾಕಿಸ್ತಾನದ ಗಡಿಯಲ್ಲಿ ನಿರ್ಮಾಣವಾಗಲಿರುವ ವಾಯುನೆಲೆಗೆ ಪ್ರಧಾನಿ ಶಂಕುಸ್ಥಾಪನೆ

0

ಗಾಂಧಿನಗರ(Gandhinagar): ಗುಜರಾತ್‌ನ ಭಾರತ-ಪಾಕಿಸ್ತಾನ ಗಡಿಯಲ್ಲಿ ಸ್ಥಾಪನೆಯಾಗಲಿರುವ ನೂತನ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.

ಗಾಂಧಿನಗರದಲ್ಲಿ ‘ಡಿಫೆನ್ಸ್ ಎಕ್ಸ್‌ಪೋ’ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಅವರು, ಉತ್ತರ ಗುಜರಾತ್‌ನ ಬನಾಸಕಾಂಠಾ ಜಿಲೆಯಲ್ಲಿ ಡೀಸಾದಲ್ಲಿ ನೆಲೆಗೊಳ್ಳಲಿರುವ ನೂತನ ವಾಯುನೆಲೆ ದೇಶದ ಭದ್ರತೆಗೆ ಅತ್ಯಂತ ಪ್ರಭಾವಶಾಲಿ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.

ವಿದೇಶದಿಂದ ಆಮದು ಮಾಡಿಕೊಳ್ಳಲಾಗದ 101 ರಕ್ಷಣಾ ಸಂಬಂಧಿತ ಸರಕುಗಳನ್ನು ಬಿಡುಗಡೆ ಮಾಡಲಿದ್ದೇವೆ. ಇದರೊಂದಿಗೆ 411 ರಕ್ಷಣಾ ಸಂಬಂಧಿತ ಉತ್ಪನ್ನಗಳನ್ನು ದೇಶೀಯವಾಗಿ ಖರೀದಿಸಬಹುದಾಗಿದೆ. ಇದು ಭಾರತದ ರಕ್ಷಣಾ ಉದ್ಯಮಕ್ಕೆ ಉತ್ತೇಜನ ನೀಡಲಿವೆ ಎಂದು ಸಹ ಪ್ರಧಾನಿ ಮೋದಿ ಹೇಳಿದರು.

ಕಳೆದ ಕೆಲವು ವರ್ಷಗಳಲ್ಲಿ ಭಾರತದ ರಕ್ಷಣಾ ಉತ್ಪನ್ನಗಳ ರಫ್ತು ಎಂಟು ಪಟ್ಟು ಹೆಚ್ಚಾಗಿವೆ ಎಂದು ಮೋದಿ ಉಲ್ಲೇಖಿಸಿದರು. ಮೊದಲೆಲ್ಲ ನಾವು ಪಾರಿವಾಳಗಳನ್ನು ಬಿಡುತ್ತಿದ್ದೆವು. ಈಗ ಚೀತಾಗಳನ್ನು ಬಿಡುತ್ತಿದ್ದೇವೆ ಎಂದು ಮಾರ್ಮಿಕವಾಗಿ ನುಡಿದರು.