ಮನೆ ರಾಷ್ಟ್ರೀಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ

0

ನವದೆಹಲಿ(Newdelhi): ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿ ಫಲಪ್ರದವಾಗಿರಲಿ ಎಂದು ಟ್ವೀಟ್‌ ಮಾಡಿದ್ದಾರೆ.

ಪಕ್ಷದ ಆಂತರಿಕ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 7,897 ಮತಗಳನ್ನು ಪಡೆದು ಆಯ್ಕೆಯಾದರು. ಇವರ ಎದುರು ಸ್ಪರ್ಧೆ ಮಾಡಿದ್ದ ಶಶಿ ತರೂರ್‌ 1072 ಮತಗಳನ್ನು ಪಡೆದು ಪರಾಭವಗೊಂಡರು.ಮಲ್ಲಿಕಾರ್ಜುನ ಖರ್ಗೆ ಅವರು ಅಕ್ಟೋಬರ್‌ 26ರಂದು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.