ಮನೆ ಸುದ್ದಿ ಜಾಲ ಬಂಟ್ವಾಳ: ಮೂರು ಮಕ್ಕಳಿಗೆ ಜನ್ಮನೀಡಿದ ತಾಯಿ

ಬಂಟ್ವಾಳ: ಮೂರು ಮಕ್ಕಳಿಗೆ ಜನ್ಮನೀಡಿದ ತಾಯಿ

0

ಬಂಟ್ವಾಳ: ಬರಿಮಾರು ಗ್ರಾಮದ ಗಾಣದಪಾಲು ನಿವಾಸಿ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಇಲ್ಲಿನ ನಿವಾಸಿ ಪದ್ಮನಾಭ ಪೂಜಾರಿ ಅವರ ಪತ್ನಿ ದೀಕ್ಷಿತಾ ಮಂಗಳೂರು ಲೇಡಿಗೋಷನ್ ಆಸ್ಪತ್ರೆಗೆ ಹೆರಿಗೆಗೆ ದಾಖಲಾಗಿದ್ದರು.

ಹೆರಿಗೆ ತಜ್ಞೆ ಡಾ.ವಿನೀತ ಶೆಟ್ಟಿ ಅವರು ಬುಧವಾರ ಶಸ್ತ್ರಚಿಕಿತ್ಸೆ ನಡೆಸಿ ಮೂರು ಮಕ್ಕಳನ್ನು ಹೆರಿಗೆ ಮಾಡಿಸಿದ್ದು, ಒಂದು ಗಂಡು ಮತ್ತು ಎರಡು ಹೆಣ್ಣು ಮಗು ತಾಯಿಯೊಂದಿಗೆ ತುರ್ತು ನಿಗಾ ಘಟಕದಲ್ಲಿ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.