ಮೆಲ್ಬರ್ನ್: ನಾವು ಕಳೆದ 9 ವರ್ಷಗಳಿಂದ ಐಸಿಸಿ ಟ್ರೋಫಿ ಗೆದ್ದಿಲ್ಲ. ಖಂಡಿತವಾಗಿಯೂ ಇದು ನಮ್ಮ ಆಟಗಾರರ ತಲೆಯಲ್ಲಿದೆ. ಆದರೆ, ಆ ಆಲೋಚನೆಗಳನ್ನೆಲ್ಲ ದೂರವಿರಿಸಿ ಸದ್ಯ ನಮ್ಮ ಕೈಯಲ್ಲಿ ಏನು ಮಾಡಲು ಸಾಧ್ಯ ಎಂಬುದರತ್ತ ನೋಡುವುದು ಬಹಳ ಮುಖ್ಯ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಈ ಬಾರಿಯ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೂಪರ್–12 ಹಂತದ ಪಂದ್ಯಗಳು ಇಂದಿನಿಂದ (ಅಕ್ಟೋಬರ್ 22) ಆರಂಭವಾಗಿವೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಟೂರ್ನಿಯಲ್ಲಿ ತಾವಾಡುವ ಮೊದಲ ಪಂದ್ಯದಲ್ಲೇ (ಅಕ್ಟೋಬರ್ 22 ರಂದು) ಮುಖಾಮುಖಿಯಾಗಲಿವೆ.
ಈ ಪಂದ್ಯದ ಮುನ್ನಾದಿನ ರೋಹಿತ್ ಶರ್ಮಾ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.
ನಾನು ಒತ್ತಡ ಎಂದು ಹೇಳಲು ಬಯಸುವುದಿಲ್ಲ. ಏಕೆಂದರೆ ಅದು ಯಾವಾಗಲೂ ಇರುವಂತದ್ದು. ಅದು ಬದಲಾಗುವುದೇ ಇಲ್ಲ. ಅದರ ಬದಲು ಸವಾಲು ಎಂದು ಹೇಳಲಿಚ್ಛಿಸುತ್ತೇನೆ. ಪಾಕಿಸ್ತಾನ ಅತ್ಯಂತ ಸವಾಲಿನ ತಂಡವಾಗಿದೆ. 2007ರಿಂದ 2022ರ ವರೆಗೆ ಆಡಿರುವ ಪಾಕಿಸ್ತಾನದ ಎಲ್ಲ ತಂಡಗಳೂ ಅತ್ಯುತ್ತಮವಾದವು ಎಂದು ಅಭಿಪ್ರಾಯಪಟ್ಟಿದ್ದಾರೆ.
ಆಗಿಹೋಗಿರುವ ವಿಚಾರಗಳ ಬಗ್ಗೆ ಅತಿಯಾಗಿ ಚಿಂತಿಸುವುದರಿಂದ, ಪ್ರಸ್ತುತ ವಿಚಾರಗಳತ್ತ ಗಮನ ಕೇಂದ್ರೀಕರಿಸಲು ಸಾಧ್ಯವಾಗುವುದಿಲ್ಲ ಎಂಬುದು ನನ್ನ ನಂಬಿಕೆ. ಹಾಗಾಗಿ. ಸದ್ಯದ ವಿಚಾರಗಳತ್ತ ಚಿತ್ತ ಹರಿಸುವುದು ಮುಖ್ಯ ಎಂದು ಪ್ರತಿಪಾದಿಸಿದ್ದಾರೆ.
ಪಾಕಿಸ್ತಾನ ತಂಡದೊಂದಿಗೆ ಸಾಕಷ್ಟು ಪಂದ್ಯಗಳಲ್ಲಿ ಕಣಕ್ಕಿಳಿಯದಿರುವುದರಿಂದ ಆ ತಂಡದ ಮನಸ್ಥಿತಿ ಹೇಗಿರಲಿದೆ ಎಂಬ ಬಗ್ಗೆ ಖಚಿತವಾಗಿ ತಿಳಿಯುವುದು ಅಸಾಧ್ಯ ಎಂದೂ ಅಭಿಪ್ರಾಯಪಟ್ಟಿದ್ದಾರೆ.
ಅದೃಷ್ಟವಶಾತ್, ಇತ್ತೀಚೆಗೆ ಮುಕ್ತಾಯವಾದ ಏಷ್ಯಾಕಪ್ ಟೂರ್ನಿಯಲ್ಲಿ ಅವರೊಂದಿಗೆ (ಪಾಕಿಸ್ತಾನ ವಿರುದ್ಧ) ಎರಡು ಬಾರಿ ಆಡಿದ್ದೇವೆ. ಅದನ್ನು ಬಿಟ್ಟು ಬೇರೆ ಪಂದ್ಯಗಳಲ್ಲಿ ಸೆಣಸಾಟ ನಡೆಸಿಲ್ಲ. ಹಾಗಾಗಿ ಅವರು ಯಾವ ಮನಸ್ಥಿತಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬುದನ್ನು ಅಂದಾಜಿಸುವುದು ಕಷ್ಟ ಎಂದಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.