ಮನೆ ರಾಜಕೀಯ ಬಿಜೆಪಿ ಅಧಿಕಾರವಧಿಯಲ್ಲಿ 5ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ ಭಾರತ: ನಳಿನ್ ಕುಮಾರ್ ಕಟೀಲ್

ಬಿಜೆಪಿ ಅಧಿಕಾರವಧಿಯಲ್ಲಿ 5ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ ಭಾರತ: ನಳಿನ್ ಕುಮಾರ್ ಕಟೀಲ್

0

ಚಾಮರಾಜನಗರ(Chamarajanagar): ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶವು ಜಗತ್ತಿನಲ್ಲಿ ಐದನೇ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಮೊದಲ ಸ್ಥಾನ ಅಲಂಕರಿಸಿದೆ ಎಂದು ತಿಳಿಸಿದರು.

ದೇಶವನ್ನು ಭಿಕ್ಷುಕರ, ಸಾಲಗಾರರ ರಾಷ್ಟ್ರವನ್ನಾಗಿ ಮಾಡಿದ್ದೇ ಕಾಂಗ್ರೆಸ್ ಸಾಧನೆ ಎಂದು ಸಿದ್ದರಾಮಯ್ಯ ಅವರು ರಾಜ್ಯವನ್ನು ಸಾಲಗಾರರ ರಾಜ್ಯವನ್ನಾಗಿ ಮಾಡಿದ್ದರು ಎಂದು ವ್ಯಂಗ್ಯವಾಡಿದರು.

ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ‌ ಸಚಿವ ವಿ.ಸೋಮಣ್ಣ ಅವರು ಬಾರದಿರುವ ಬಗ್ಗೆ‌ ಪ್ರತಿಕ್ರಿಯಿಸಿದ ಅವರು, ಅನಾರೋಗ್ಯದ ಕಾರಣದಿಂದ ಅವರು ಬಂದಿಲ್ಲ  ಎಂದರು.