ಪಿರಿಯಾಪಟ್ಟಣ(Periyapattana): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪಿರಿಯಾಪಟ್ಟಣ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಡಿ.ದೇವರಾಜ ಅರಸು ಕಲಾ ಭವನವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ದೇವರಾಜ ಅರಸು ಅಭಿಮಾನಿ, ಶಿಷ್ಯನಾಗಿ ಅವರ ಹೆಸರಿನಲ್ಲಿ ನಿರ್ಮಿಸಿರುವ ಕಟ್ಟಡ ಉದ್ಘಾಟನೆ ಮಾಡುವ ಭಾಗ್ಯ ಸಿಕ್ಕಿದೆ ಎಂದರು.
ರಾಜ್ಯದ ಜನತೆ ದೇವರಾಜ ಅರಸು ಅವರನ್ನು ನೆನೆಸಿಕೊಳ್ಳಬೇಕು. ಎಂಟು ವರ್ಷ ಆಡಳಿತ ನಡೆಸಿ ಎಲ್ಲಾ ಸಮುದಾಯದವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು. ಅರಸು ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜನಪರ ಕಾರ್ಯಕ್ರಮ ನೀಡಿದವರು. ಪಿರಿಯಾಪಟ್ಟಣದಲ್ಲಿ ಅವರ ಹೆಸರಿನಲ್ಲಿ ಕಟ್ಟಡ ನಿರ್ಮಾಣ ಮಾಡಿ ಜನತೆಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದರು.
ಸರ್ಕಾರದ ಹಂತದಲ್ಲಿ ಕೆಲಸ ಮಾಡಿಸಿಕೊಳ್ಳ ಸಾಮರ್ಥ್ಯ ಮಹದೇವ್ ಅವರಿಗಿದೆ. ಕೆರೆ ತುಂಬಿಸುವ, ಮನೆಮನೆಗೆ ನಳ ಸಂಪರ್ಕ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಮಹದೇವ್ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ. ಪಕ್ಷ ಯಾವುದೇ ಇರಲಿ, ಅಭಿವೃದ್ಧಿಗೆ ಕೈಜೋಡಿಸುತ್ತೇವೆ ಎಂದು ಹೇಳಿದರು.
ಶಾಸಕರಾದ ಮಹದೇವ್, ಸಂಸದರಾದ ಪ್ರತಾಪ್ ಸಿಂಹ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.