ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಾವಳಿ 2021ಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದು ದೂರು ಪರಿಹಾರ ವ್ಯವಸ್ಥೆಗೆ ಗಮನಾರ್ಹ ಬದಲಾವಣೆ ತಂದಿದೆ.
ತಿದ್ದುಪಡಿ ಮಾಡುವ ಮೂಲಕ ಹೊಸದಾಗಿ ಜಾರಿಗೆ ತಂದಿರುವ 3ಎ ನಿಯಮಾವಳಿ ದೂರು ಮೇಲ್ಮನವಿ ಸಮಿತಿಯನ್ನು ಸ್ಥಾಪಿಸಲು ಅವಕಾಶ ಒದಗಿಸಿದೆ.
ಕೇಂದ್ರ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ತಂದ ದಿನದಿಂದ ಮೂರು ತಿಂಗಳೊಳಗೆ ಒಂದು ಅಥವಾ ಅದಕ್ಕಿಂತಲೂ ಹೆಚ್ಚಿನ ದೂರು ಮೇಲ್ಮನವಿ ಸಮಿತಿಗಳನ್ನು ಸ್ಥಾಪಿಸಬೇಕು ಎಂದು 3ಎ ನಿಯಮಾವಳಿ ಹೇಳುತ್ತದೆ.
ನಿಯಮ 3ಎ (2) ರ ಪ್ರಕಾರ, ಪ್ರತಿಯೊಂದು ದೂರು ಮೇಲ್ಮನವಿ ಸಮಿತಿಯು ಕೇಂದ್ರ ಸರ್ಕಾರದಿಂದ ನೇಮಕಗೊಂಡ ಅಧ್ಯಕ್ಷರು ಮತ್ತು ಇಬ್ಬರು ಪೂರ್ಣಾವಧಿ ಸದಸ್ಯರನ್ನು ಒಳಗೊಂಡಿರಬೇಕಿದ್ದು ಅದರಲ್ಲಿ ಒಬ್ಬರು ಪದನಿಮಿತ್ತ ಸದಸ್ಯರು ಮತ್ತು ಇಬ್ಬರು ಸ್ವತಂತ್ರ ಸದಸ್ಯರಿರಬೇಕು.
ಹೊಸ ನಿಯಮದ ಪ್ರಕಾರ ಕುಂದು ಕೊರತೆ ಅಧಿಕಾರಿ ನೀಡಿದ ತೀರ್ಪಿನಿಂದ ಬಾಧಿತರಾದವರು ಮೂವತ್ತು ದಿನಗಳ ಒಳಗಾಗಿ ದೂರು ಮೇಲ್ಮನವಿ ಸಮಿತಿಗೆ ಮೇಲ್ಮನವಿ ಸಲ್ಲಿಸಬಹುದಾಗಿದೆ. ಪ್ರಕರಣದ ಸಲುವಾಗಿ ಸಮಿತಿಗೆ ಅಗತ್ಯವೆನಿಸಿದರೆ ಸೂಕ್ತ ಅರ್ಹತೆ, ಅನುಭವ ಮತ್ತು ವಿಷಯದಲ್ಲಿ ಪರಿಣತಿ ಹೊಂದಿರುವ ಯಾವುದೇ ವ್ಯಕ್ತಿಯ ಸಹಾಯವನ್ನು ಪಡೆಯಬಹುದಾಗಿದೆ.
ಸಮಿತಿ ಆನ್ಲೈನ್ ವ್ಯಾಜ್ಯ ಪರಿಹಾರ ವ್ಯವಸ್ಥೆಯನ್ನು ಅಳವಡಿಸಿಕೊಂಡು ಮೇಲ್ಮನವಿ ಸಲ್ಲಿಸುವುದರಿಂದ ಹಿಡಿದು ತೀರ್ಪು ನೀಡುವವರೆಗೆ ಇಡೀ ಪ್ರಕ್ರಿಯೆ ಸಂಪೂರ್ಣ ಡಿಜಿಟಲ್ ವಿಧಾನದಲ್ಲಿರಬೇಕು. ಸಮಿತಿ ನೀಡಿದ ಎಲ್ಲಾ ತೀರ್ಪುಗಳನ್ನು ಸಾಮಾಜಿಕ ಮಾಧ್ಯಮ ಮಧ್ಯವರ್ತಿ ವೇದಿಕೆಯು ಪಾಲಿಸಿ ಆ ಕುರಿತ ವರದಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಬೇಕು.
ಐಟಿ ನಿಯಮಾವಳಿ 2021ರ ಅಡಿಯಲ್ಲಿ ನೀಡಲಾದ ಎಚ್ಚರಿಕೆಗಳನ್ನು ಬಳಕೆದಾರರು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದಕ್ಕಾಗಿ ತಿದ್ದುಪಡಿ ಮಾಡಲಾದ ನಿಯಮಗಳು ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳ ಮೇಲೆ ಹೊಣೆ ಹೊರಿಸುತ್ತವೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.