ಮನೆ Uncategorized ಬೆಂಗಳೂರು: ಫ್ಲೈ ಓವರ್ ನಿಂದ ಕೆಳಗೆ ಬಿದ್ದು ಇಬ್ಬರು ಬೈಕ್ ಸವಾರರು ದುರ್ಮರಣ

ಬೆಂಗಳೂರು: ಫ್ಲೈ ಓವರ್ ನಿಂದ ಕೆಳಗೆ ಬಿದ್ದು ಇಬ್ಬರು ಬೈಕ್ ಸವಾರರು ದುರ್ಮರಣ

0

ಬೆಂಗಳೂರು(Bengaluru): ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಪ್ಲೈ ಓವರ್​’ನಿಂದ  ಬೈಕ್ ಕೆಳಗೆ ಬಿದ್ದಿದ್ದು, ಇಬ್ಬರು ಸವಾರರು ಮೃತಪಟ್ಟಿದ್ದಾರೆ.

ಉತ್ತರ ಭಾರತ ಮೂಲದ ವಿಕ್ರಮ್(28), ಅಮಿತ್ ಸಿಂಗ್(27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇನ್ನೊಬ್ಬ ವ್ಯಕ್ತಿ ಸೌರಭ್(27) ಸ್ಥಿತಿ ಗಂಭೀರವಾಗಿದ್ದು, ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇವರು ಬೆಂಗಳೂರಿನ ಹೆಚ್​ಎಸ್​ಆರ್​ ಲೇಔಟ್​ನಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ. ಫ್ಲೈಓವರ್​ ತಡೆಗೋಡೆಗೆ ಬೈಕ್ ಸವಾರರು ಡಿಕ್ಕಿ ಹೊಡೆದು ಇಬ್ಬರು ಬೈಕ್  ಪ್ಲೈ ಓವರ್​ನಿಂದ ಕೆಳಗೆ ಬಿದ್ದು  ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಈ ಇಬ್ಬರ ಮೃತದೇಹವನ್ನು ಸ್ಥಳಾಂತರ ಮಾಡಲಾಗಿದೆ. 

ಈ ಕುರಿತು ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.