ಮನೆ ಉದ್ಯೋಗ ಏರ್ ಇಂಡಿಯಾ ಎಕ್ಸ್’ಪ್ರೆಸ್’ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಏರ್ ಇಂಡಿಯಾ ಎಕ್ಸ್’ಪ್ರೆಸ್’ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಏರ್ ಇಂಡಿಯಾ ಎಕ್ಸ್’ಪ್ರೆಸ್’ನಲ್ಲಿ ವಿವಿಧ ಟ್ರೇನಿ ಕ್ಯಾಬಿನ್ ಕ್ರ್ಯೂ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಂಗಳೂರಿನಲ್ಲಿ ಪೋಸ್ಟಿಂಗ್ ಖಾಲಿ ಇದ್ದು, ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗಿಯಾಗಬೇಕು. ನವೆಂಬರ್ 12, 2022ರಂದು ಸಂದರ್ಶನ ನಡೆಯಲಿದೆ.

ವಿದ್ಯಾರ್ಹತೆ:

ಏರ್ ಇಂಡಿಯಾ ಎಕ್ಸ್’ಪ್ರೆಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇನಿ ಕ್ಯಾಬಿನ್ ಕ್ರ್ಯೂ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ/12ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:

ಏರ್ ಇಂಡಿಯಾ ಎಕ್ಸ್’ಪ್ರೆಸ್  ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇನಿ ಕ್ಯಾಬಿನ್ ಕ್ರ್ಯೂ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಇರಬೇಕು.

ವಯೋಮಿತಿ ಸಡಿಲಿಕೆ:

ಏರ್ ಇಂಡಿಯಾ ಎಕ್ಸ್’ಪ್ರೆಸ್ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:

ಓಸನ್ ಪರ್ಲ್ 3 ಸ್ಟಾರ್ ಹೋಟೆಲ್

ನವಭಾರತ್ ಸರ್ಕಲ್

ಕೊಡೈಬೈಲ್

ಮಂಗಳೂರು

ಕರ್ನಾಟಕ-575003

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆ ದಿನಾಂಕ: 28/10/2022

ಸಂದರ್ಶನ ನಡೆಯುವ ದಿನಾಂಕ: 12/11/2022