ರಾಮನಗರ ಜಿಲ್ಲೆ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹನಿಟ್ರ್ಯಾಪ್ ಮಾಡಿದ್ದ ಆರೋಪದ ಮೇಲೆ ಮಾಗಡಿ ತಾಲೂಕಿನ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ, ಎಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ (ಚಂದು) ಹಾಗೂ ಕಣ್ಣೂರು ಮಠದ ವಕೀಲ ಮಹಾದೇವಯ್ಯ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಮೂವರನ್ನೂ ಇಂದು (ಅ. 30) ಬಂಧಿಸಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಪ್ರಕರಣದ ಮೂವರೂ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪುರುಷ ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದ್ದು ಯುವತಿಯನ್ನು ಬೆಂಗಳೂರಿನ ಜೈಲಿಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಡೆಮಠದ ಶ್ರೀಗಳಿಗೂ ಮತ್ತು ಕಣ್ಣೂರು ಮಠದ ಸ್ವಾಮೀಜಿಗೂ ವೈಷಮ್ಯ ಇತ್ತು. ಅವರಿಬ್ಬರೂ ಪೂರ್ವಾಶ್ರಮದಲ್ಲಿ ಸೋದರ ಸಂಬಂಧಿಗಳಾಗಿದ್ದರು. ಎರಡೂ ಮಠಗಳ ನಡುವೆ ಆಸ್ತಿಗೆ ಸಂಬಂಧಿಸಿದ ವಿವಾದ ಇತ್ತು. ಈ ಹಿನ್ನೆಲೆಯಲ್ಲಿ ಯುವತಿಯನ್ನು ಬಳಸಿಕೊಂಡು ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ ಹನಿಟ್ರ್ಯಾಪ್ ಮಾಡಿಸಿದ್ದರು ಎನ್ನಲಾಗಿದೆ.
ಬಸವಲಿಂಗ ಸ್ವಾಮೀಜಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಯುವತಿ ಅಶ್ಲೀಲ ವೀಡಿಯೊ ತಯಾರಿಸಿದ್ದರು. ಅದನ್ನು ಪಡೆದಿದ್ದ ವಕೀಲ ಮಹಾದೇವಯ್ಯ ತುಮಕೂರಿನಲ್ಲಿ ಸಿ ಡಿ ಮಾಡಿಸಿ ಸಂಬಂಧಪಟ್ಟವರಿಗೆ ಹಂಚಿದ್ದರು ಎಂಬ ಆರೋಪ ಇದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.