ನವದೆಹಲಿ: ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ಇಂದು ತೀರ್ಪು ನೀಡಿದೆ.
2 ಕೋಟಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಅಸ್ತು ಎಂದಿದ್ದ ಕರ್ನಾಟಕ ಹೈಕೋರ್ಟ್ನ ತೀರ್ಪು ಪ್ರಶ್ನಿಸಿ ಮಾಜಿ ಸಿಎಂ ಬಿಎಸ್ವೈ ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದರು. ಈ ಅರ್ಜಿ ವಿಚಾರಣೆ ನಡೆಸಿ ಪ್ರಕರಣದ ತನಿಖೆಗೆ ತಡೆ ನೀಡಿ, ಪ್ರತಿವಾದಿಗಳಿಗೆ ಈ ಮೊದಲು ಸುಪ್ರೀಂ ನೋಟಿಸ್ ಜಾರಿ ಮಾಡಿತ್ತು. ಇಂದು ಕೂಡ ವಿಚಾರಣೆ ನಡೆಸದ ಕೋರ್ಟ್, ತಡೆಯಾಜ್ಞೆಯನ್ನು ವಿಸ್ತರಿಸಿ ಆದೇಶಿಸಿದೆ.
ಇತ್ತೀಚೆಗಷ್ಟೇ ಸುಪ್ರೀಂಕೋರ್ಟ್ನಲ್ಲಿ ಬಿಎಸ್ವೈ ಹಾಗೂ ಅವರ ಕುಟುಂಬದ ವಿರುದ್ಧ ಪ್ರಕರಣದ ವಿಚಾರಣೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸುವಂತೆ ಲೋಕಾಯುಕ್ತರಿಗೆ ಸೂಚನೆ ನೀಡಿತ್ತು. ಕೆಳ ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತದಲ್ಲಿ ಎಫ್ಎಆರ್ ಕೂಡಾ ದಾಖಲಾಗಿತ್ತು.
ಈ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಹೈಕೋರ್ಟ್ ತೀರ್ಪಿಗೆ ನೀಡಿದ್ದ ತಡೆಯನ್ನು ವಿಸ್ತರಿಸಿದೆ.
ಪ್ರಕರಣದ ಹಿನ್ನೆಲೆ: ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಆದರೆ, ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.
ದೂರನ್ನು ಮರುಪರಿಶೀಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು. ಬಳಿಕ ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆಗೆ ಮುಂದಾಗಿರುವ ಲೋಕಾಯುಕ್ತ ಪೊಲೀಸರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಮತ್ತಿತರರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ನಮ್ಮ ಪರವಾದ ವಕೀಲರು ಸುಪ್ರೀಂಕೋರ್ಟ್ನಲ್ಲಿ ವಾದ ಮಂಡಿಸುವುದಕ್ಕಾಗಿ ಸಿದ್ಧರಾಗುತ್ತಿದ್ದಾರೆ ಎಂದು ಟಿ.ಜೆ. ಅಬ್ರಾಹಂ ವಿವರಿಸಿದ್ದರು. ಈಗ ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಸುಪ್ರೀಂ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.