ನವದೆಹಲಿ(Newdelhi): ಗಗನಕ್ಕೇರಿದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆಯಾಗಿದೆ.
ಇಂದಿನಿಂದ ಪ್ರತಿ ಸಿಲಿಂಡರ್‌ಗೆ 115.50 ರೂ.ಯಷ್ಟು ಕಡಿಮೆಯಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಈಗ 1,744 ರೂ. ಗೆ ಇಳಿದಿದೆ.
ತೈಲ ಮಾರುಕಟ್ಟೆ ಕಂಪನಿಗಳು ಕೊನೆಯ ಬಾರಿಗೆ ಮೇ ತಿಂಗಳಲ್ಲಿ ಬೆಲೆ ಏರಿಕೆ ಮಾಡಿದ್ದವು. ತೈಲ ಮಾರುಕಟ್ಟೆ ಕಂಪನಿಗಳು ಸಾಮಾನ್ಯವಾಗಿ ಪ್ರತಿ ತಿಂಗಳ ಆರಂಭದಲ್ಲಿ ಮತ್ತು ಮಧ್ಯದಲ್ಲಿ ಎಲ್‌ಪಿಜಿ ಬೆಲೆ ಬದಲಾವಣೆಯನ್ನು ಪ್ರಕಟಿಸುತ್ತವೆ.