ಮನೆ ರಾಷ್ಟ್ರೀಯ ದೆಹಲಿಯ ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ: ಇಬ್ಬರು ಸಾವು, ಹಲವರಿಗೆ ಗಾಯ

ದೆಹಲಿಯ ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ: ಇಬ್ಬರು ಸಾವು, ಹಲವರಿಗೆ ಗಾಯ

0

ನವದೆಹಲಿ(Newdelhi): ದೆಹಲಿಯ ನರೆಲಾ ಕೈಗಾರಿಕಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕೆ ಕಾರ್ಖಾನೆಯಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಹಚ್ಚಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅಗ್ನಿಶಾಮಕ ದಳದ ಅಧಿಕಾರಿಗಳು, ನರೆಲಾ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಮೂವರನ್ನು ರಕ್ಷಿಸಲಾಗಿದೆ.

ಇನ್ನೂ ಹಲವರು ಕಾರ್ಖಾನೆಯಲ್ಲಿ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.