ಮೈಸೂರು(Mysuru): ನೇಸರ ಚಾರಿಟಬಲ್ ಟ್ರಸ್ಟ್ (ರಿ) ಹಾಗೂ ಸ್ಪರ್ಶ ಕಣ್ಣಿನ ಆಸ್ಪತ್ರೆ ವತಿಯಿಂದ ತಾಲೂಕಿನ ಹೊಸಹುಂಡಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಂಗಳವಾರ ಏರ್ಪಡಿಸಲಾಗಿತ್ತು.
ಶಿಬಿರವನ್ನು ಟ್ರಸ್ಟ್’ನ ಅಧ್ಯಕ್ಷ ಮಾದಪ್ಪ (ಮಿಲ್ಟ್ರಿ) ಕಾರ್ಯಕ್ರಮ ಉದ್ಘಾಟಿಸಿದರು. ಟ್ರಸ್ಟ್ ಕಾರ್ಯದರ್ಶಿ ರವೀಂದ್ರ ಆರೋಗ್ಯದ ಬಗ್ಗೆ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್’ನ ಇತರ ಪದಾಧಿಕಾರಿಗಳು ಹಾಗೂ 200ಕ್ಕೂ ಅಧಿಕ ಗ್ರಾಮಸ್ಥರು ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಂಡರು.














